ವಿಚಾರಣೆ ನೆಪದಲ್ಲಿ ಸಬ್‌ರಿಜಿಸ್ಟ್ರಾರ್‌ಗಳಿಗೆ ಕಿರುಕುಳ ಸಲ್ಲದು

ಡಿಜಿ-ಐಜಿಪಿ ಡಾ.ಎಂ.ಎ. ಸಲೀಂ ಅವರಿಂದ ಸುತ್ತೋಲೆ, ನೋಟಿಸ್‌ಗೆ ಸಕ್ಷಮ ಇಲಾಖಾ ಮುಖ್ಯಸ್ಥರ ಪೂರ್ವಾನುಮತಿ ಕಡ್ಡಾಯ
ಡಾ.ಎಂ. ಎ.ಸಲೀಂ-ರಾಜ್ಯ ಪೊಲೀಸ್ ಮಹಾನಿರ್ದೇಶಕ
ಡಾ.ಎಂ. ಎ.ಸಲೀಂ-ರಾಜ್ಯ ಪೊಲೀಸ್ ಮಹಾನಿರ್ದೇಶಕ
Published on: 

ಬೆಂಗಳೂರು: ಸಂತ್ರಸ್ತರು ನೀಡಿದ ದೂರಿನ ಮೇರೆಗೆ ಎಫ್ ಐಆರ್ ದಾಖಲಾದರೆ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಅಧಿಕಾರಿ, ಸಿಬ್ಬಂದಿಯನ್ನು ಸಾಕ್ಷಿಯಾಗಿ ಪರಿಗಣಿಸಬೇಕು. ಅವರು ಬಯಸಿದ ಸ್ಥಳಕ್ಕೆ ತೆರಳಿ ಹೇಳಿಕೆ ದಾಖಲಿಸಿಕೊಳ್ಳುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ. ಸಲೀಂ ಅವರು ಪೊಲೀಸ್ ಠಾಣೆಗಳಿಗೆ ಸುತ್ತೋಲೆ ಹೊರಡಿಸಿದ್ದಾರೆ.

ಭೂಗಳ್ಳರು ಅಥವಾ ವಂಚಕರು ನಕಲಿ ದಾಖಲೆ ಸಲ್ಲಿಸಿ ಉಪನೋಂದಣಾಧಿಕಾರಿ ಕಚೇರಿಯಲ್ಲಿ ಸ್ಥಿರಾಸ್ತಿ ದಸ್ತಾವೇಜು ನೋಂದಣಿ ಮಾಡಿಸಿದಾಗ ನೊಂದ ವ್ಯಕ್ತಿಗಳು ಅಥವಾ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಅಧಿಕಾರಿಗಳು ಪೊಲೀಸ್ ಠಾಣೆಗೆ ದೂರು ಸಲ್ಲಿಸುತ್ತಾರೆ.

ಈ ಮೇರೆಗೆ ಎಫ್ ಐಆರ್ ದಾಖಲಿಸುವ ಪೊಲೀಸರು, ಸಕ್ಷಮ ಇಲಾಖೆ ಪೂರ್ವಾನುಮತಿ ಪಡೆಯದೆ ವಿಚಾರಣೆ ನೆಪದಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಅಧಿಕಾರಿ, ಸಿಬ್ಬಂದಿಗೆ ನೋಟಿಸ್ ಕೊಟ್ಟು ಕಿರುಕುಳ ನೀಡುತ್ತಾರೆ ಎಂಬ ಆರೋಪ ಕೇಳಿಬಂದಿದ್ದವು.

ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ ಕಲಂ 179 ರಡಿಯಲ್ಲಿ ಸೂಕ್ತ ನೋಟೀಸ್ ಕೊಟ್ಟು ಹಾಜರಿಸಿಕೊಳ್ಳಬೇಕು ಅಥವಾ ಅವರು ಬಯಸಿದ ಸ್ಥಳಕ್ಕೆ ಹೋಗಿ ಹೇಳಿಕೆ ಪಡೆಯಬೇಕು.
ಡಾ.ಎಂ. ಎ.ಸಲೀಂ-ರಾಜ್ಯ ಪೊಲೀಸ್ ಮಹಾನಿರ್ದೇಶಕ

ಆದರಿಂದ ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖಾ ನೌಕರರ ಸಂಘದ ಅಧ್ಯಕ್ಷ ಬಿ.ಎಚ್. ಶಂಕರೇಗೌಡ ನೇತೃತ್ವದ ನಿಯೋಗ ಡಿಜಿ-ಐಜಿಪಿ ಡಾ.ಎಂ.ಎ.ಸಲೀಂ ಅವರನ್ನು ಭೇಟಿ ಮಾಡಿ ಈ ಬಗ್ಗೆ ದೂರು ಸಲ್ಲಿಸಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಡಿಜಿ-ಐಜಿಪಿ, ಪೊಲೀಸ್ ಠಾಣೆಗಳಲ್ಲಿ ದಾಖಲಾಗುವ ಪ್ರಕರಣಗಳಲ್ಲಿ ದಸ್ತಾವೇಜು ಹಾಗೂ ಅವುಗಳ ನೈಜತೆ ಕುರಿತಂತೆ ಪ್ರಾಥಮಿಕ ವಿಚಾರಣೆ ಹೆಸರಿನಲ್ಲಿ ಇಲಾಖಾ ಮುಖ್ಯಸ್ಥರ ಪೂರ್ವಾನುಮತಿ ಇಲ್ಲದೇ ಮುದ್ರಾಂಕ ಇಲಾಖೆಯ ಅಧಿಕಾರಿ, ಸಿಬ್ಬಂದಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗುತ್ತಿದೆ ಎಂಬ ಆಕ್ಷೇಪಣೆ ಕೇಳಿಬಂದಿವೆ. ಆದರಿಂದ ರಾಜ್ಯದ ಎಲ್ಲ ಪೊಲೀಸ್ ಠಾಣೆಗಳು ಈ ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕೆಂದು ಸೂಚನೆ ನೀಡಿದ್ದಾರೆ.

ಮೇಲಾಧಿಕಾರಿಗಳ ಅನುಮತಿ ಕಡ್ಡಾಯ : ಮುದ್ರಾಂಕ ಇಲಾಖೆಯ ಅಧಿಕಾರಿ, ಸಿಬ್ಬಂದಿಯ ವಿಚಾರಣೆ ಕುರಿತಂತೆ ಹಾಜರಾತಿ ಅನಿವಾರ್ಯತೆ ಹಾಗೂ ಅವಶ್ಯಕತೆ ಉಂಟಾದ ಸಂದರ್ಭದಲ್ಲಿ ಠಾಣಾಧಿಕಾರಿಗಳು ತಮ್ಮ ಮೇಲಾಧಿಕಾರಿಗಳ ಗಮನಕ್ಕೆ ವಿಷಯ ತರಬೇಕು. ಆನಂತರ ಮುದ್ರಾಂಕ ಇಲಾಖೆಯ ಸಕ್ಷಮ ಅಧಿಕಾರಿಗಳಿಗೆ ವಿಷಯ ತಿಳಿಸಿ ಆನಂತರ ಸಂಬಂಧಪಟ್ಟ ಅಧಿಕಾರಿ, ಸಿಬ್ಬಂದಿಗೆ ನೋಟೀಸ್ ನೀಡುವ ಕ್ರಮ ಕೈಗೊಳ್ಳಬೇಕು ಎಂದು ಡಾ.ಎಂ.ಎ. ಸಲೀಂ ಸೂಚನೆ ನೀಡಿದ್ದಾನೆ.

ವಂಚನೆ ಮತ್ತು ದಾಖಲಾತಿಗಳ ಖೋಟ್ಟಿಯಾಗಿ ಸೃಷ್ಟಿಸುವಿಕೆ ಇತ್ಯಾದಿ ಆಪಾದನೆಗಳನ್ನು ಮಾಡಿ ದೂರುದಾರ ದೂರು ಸಲ್ಲಿಸಿದಾಗ ಠಾಣಾಧಿಕಾರಿಗಳು ಪ್ರಕರಣ ದಾಖಲಿಸುವ ಮೊದಲು ಪ್ರಾಥಮಿಕ ವಿಚಾರಣೆ ಕೈಗೊಳ್ಳುತ್ತಿರುವುದು ಕಂಡುಬಂದಿದೆ. ಜತೆಗೆ ಆಪಾದನೆಗೆ ಒಳಪಟ್ಟ ದಾಖಲಾತಿಗಳ ನೈಜತೆ ಅಲಿತನ ಹಾಗೂ ನೋಂದಣಿ ಕ್ರಮಗಳನ್ನು ವಿಚಾರಣೆ ಮಾಡಲು ಬರುವುದಿಲ್ಲ. ಆದರೂ ಠಾಣಾಧಿಕಾರಿಗಳು ಪ್ರಾಥಮಿಕ ವಿಚಾರಣೆಯಲ್ಲಿ ಮುದ್ರಾಂಕ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗೆ ನೋಟೀಸ್ ನೀಡಿ ಹಾಜರಾಗುವಂತೆ ಸೂಚಿಸಲು ಕಾನೂನಿನಲ್ಲಿ ಅವಕಾಶ ಇರುವುದಿಲ್ಲ ಎಂದು ಡಿಜಿ-ಐಜಿಪಿ ಸುತ್ತೋಲೆಯಲ್ಲಿ ಸ್ಪಷ್ಟಪಡಿಸಿದ್ದಾರೆ.