ಗುರುವಾರ ರಾತ್ರಿ ನಡೆಯಲಿರುವ ಶ್ರೀಆದಿಶಕ್ತ್ಯಾತ್ಮಕ ದ್ರೌಪದಾಂಬ ದೇವಿ ಕರಗ ಮಹೋತ್ಸವಕ್ಕೆ ಸಿದ್ಧತೆ ಪೂರ್ಣಗೊಂಡಿವೆ. ದೇವಾಲಯವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ. ನಗರದ ವಿವಿಧ ವೃತ್ತಗಳಲ್ಲಿ ತಮಿಳುನಾಡು ಕಲಾವಿದರಿಂದ ತಯಾರಿಸಲಾದ ವಿವಿಧ ದೇವತೆಗಳ ವಿದ್ಯುತ್ ದೀಪಾಲಂಕಾರ, ಬೃಹತ್ ಕಟೌಟು ಮೆರುಗು ನೀಡಿವೆ. ಕರಗದ ಪ್ರಯುಕ್ತ ದೇವಾಲಯದಲ್ಲಿ ವಿಶೇಷ ಗಣ ಹೋಮ, ನವಗ್ರಹ ಹೋಮ, ಚಂಡಿಕಾ ಹೋಮ ನಡೆಯಿತು. ಕರಗ ಉತ್ಸವದವರೆಗೆ ನಿತ್ಯ ಅಭಿಷೇಕ, ಪೊಂಗಲ್ ಸೇವೆ ನೆರವೇರಿಸಲಾಯಿತು.