ಪೊಲೀಸ್ ಇಲಾಖೆ ಮೇಲೆ ಆತ್ಮವಿಶ್ವಾಸವಿರಲಿ

ಮುದ್ದೇಬಿಹಾಳ ಪಟ್ಟಣದ ಟಾಪ್ ಇನ್ ಟೌನ್ ಹಾಲ್‌ನಲ್ಲಿ ಶನಿವಾರ ಪೊಲೀಸ್ ಇಲಾಖೆಯ ಸಿಬ್ಬಂದಿ ಹಾಗೂ ಅಂಜುಮನ್ ಸಂಸ್ಥೆಯ ಚುನಾವಣೆಯಲ್ಲಿ ಆಯ್ಕೆಯಾದ ಸದಸ್ಯರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು. ಅಬ್ದುಲ್ ಗಫೂರಸಾಬ ಮಕಾನದಾರ, ಪ್ರಭುರಾಜ ಕಲಬುರ್ಗಿ, ಬಿ.ಕೆ. ಬಿರಾದಾರ ಮತ್ತಿತರರಿದ್ದರು.
ಮುದ್ದೇಬಿಹಾಳ ಪಟ್ಟಣದ ಟಾಪ್ ಇನ್ ಟೌನ್ ಹಾಲ್‌ನಲ್ಲಿ ಶನಿವಾರ ಪೊಲೀಸ್ ಇಲಾಖೆಯ ಸಿಬ್ಬಂದಿ ಹಾಗೂ ಅಂಜುಮನ್ ಸಂಸ್ಥೆಯ ಚುನಾವಣೆಯಲ್ಲಿ ಆಯ್ಕೆಯಾದ ಸದಸ್ಯರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು. ಅಬ್ದುಲ್ ಗಫೂರಸಾಬ ಮಕಾನದಾರ, ಪ್ರಭುರಾಜ ಕಲಬುರ್ಗಿ, ಬಿ.ಕೆ. ಬಿರಾದಾರ ಮತ್ತಿತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ನಾಡಗೌಡ ಅಪ್ಪಾಜಿ ಹೇಳಿಕೆ
  • ಅಭಿನಂದನಾ ಸಮಾರಂಭ ಆಯೋಜನೆ
ಮುದ್ದೇಬಿಹಾಳ :

ಪೊಲೀಸ್ ಇಲಾಖೆ ಎಂದರೆ ಸಾರ್ವಜನಿಕರಲ್ಲಿ ವಿಶ್ವಾಸವೇ ಇಲ್ಲದಂತಾಗಿತ್ತು. ಆದರೆ ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿರುವುದು, ಪೊಲೀಸ್ ಇಲಾಖೆ ಎಷ್ಟು ಪ್ರಾಮಾಣಿಕವಾಗಿ ಹಾಗೂ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತದೆ ಎಂಬುದನ್ನು ಸಾಬೀತು ಪಡಿಸಿದೆ ಎಂದು ಶಾಸಕ ಸಿ.ಎಸ್. ನಾಡಗೌಡ ಅಪ್ಪಾಜಿ ಹೇಳಿದರು.

ಪಟ್ಟಣದ ಟಾಪ್ ಇನ್ ಟೌನ್ ಹಾಲ್‌ನಲ್ಲಿ ಶನಿವಾರ ಪೊಲೀಸ್ ಇಲಾಖೆಯ ಸಿಬ್ಬಂದಿ ಹಾಗೂ ಅಂಜುಮನ್ ಸಂಸ್ಥೆಯ ಚುನಾವಣೆಯಲ್ಲಿ ಆಯ್ಕೆಯಾದ ಸದಸ್ಯರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಾರ್ವಜನಿಕರಲ್ಲಿ ಪೊಲೀಸ್ ಇಲಾಖೆಯ ಮೇಲಿನ ಆತ್ಮವಿಶ್ವಾಸ ಮತ್ತಷ್ಟು ಹೆಚ್ಚಾಗಿದೆ. ಪ್ರಕರಣ ಭೇದಿಸುವಲ್ಲಿ ಶ್ರಮಿಸಿದ ಎಲ್ಲ ಪೊಲೀಸ್ ಸಿಬ್ಬಂದಿಯ ಕಾರ್ಯ ಶ್ಲಾಘನೀಯ ಎಂದು ಪ್ರಶಂಸಿಸಿದರು.
ವಿಜಯಪುರ ಜಿಲ್ಲೆಯಲ್ಲಿಯೇ ಮುದ್ದೇಬಿಹಾಳದಲ್ಲಿ ವಕ್ಫ್‌ಗೆ ಸೇರಿದ ಆಸ್ತಿ ಹೆಚ್ಚಿನ ಪ್ರಮಾಣದಲ್ಲಿದೆ ಎಂಬುದನ್ನು ಎಲ್ಲರೂ ತಿಳಿದುಕೊಳ್ಳಬೇಕು. ಆದರೆ ಹಲವು ದಶಕಗಳಿಂದ ಇಲ್ಲಿನ ಅಂಜುಮನ್ ಸಂಸ್ಥೆಯ ಚುನಾವಣೆ ನಡೆದಿರಲಿಲ್ಲ. ಇದೀಗ ಚುನಾವಣೆ ನಡೆದಿದ್ದು, ಸದಸ್ಯರಾಗಿ ಆಯ್ಕೆಯಾದವರು ಸಮಾಜದ ಅಭಿವೃದ್ಧಿಯೊಂದಿಗೆ ಅಂಜುಮನ್ ಸಂಸ್ಥೆಯ ಅಭಿವೃದ್ಧಿಗೂ ಶ್ರಮಿಸಬೇಕು ಎಂದು ಶಾಸಕ ನಾಡಗೌಡ ಅಪ್ಪಾಜಿ ಕರೆ ನೀಡಿದರು.
ಅಬ್ದುಲ್ ಗಫೂರಸಾಬ ಮಕಾನದಾರ, ತಾಲೂಕು ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲಬುರ್ಗಿ, ಪಿಎಲ್ ಡಿ ಬ್ಯಾಂಕ ಅಧ್ಯಕ್ಷ ಬಿ.ಕೆ. ಬಿರಾದಾರ, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಶಿವಶಂಕರಗೌಡ ಹಿರೇಗೌಡರ, ಬಾಲಾಜಿ ಶುಗರ್ಸ್ ರಾಹುಲಗೌಡ ಪಾಟೀಲ, ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ ಮತ್ತಿತರರಿದ್ದರು.
ಬಸರಕೋಡ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಪೊಲೀಸ್ ಸಿಬ್ಬಂದಿಯನ್ನು
ಸನ್ಮಾನಿಸಿ ಅಭಿನಂದಿಸಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net