ನಿಯಮಿತವಾಗಿ ಆರೋಗ್ಯ ತಪಾಸಣೆ ಇರಲಿ

ಸೋಮವಾರಪೇಟೆಯ  ಒಕ್ಕಲಿಗರ ಸಮುದಾಯ ಭವನದಲ್ಲಿ ಏರ್ಪಡಿಸಿದ್ದ ಆರೋಗ್ಯ ತಪಾಸಣೆ ಶಿಬಿರವನ್ನು ಶಾಸಕ ಡಾ. ಮಂತರ್‌ಗೌಡ ಉದ್ಘಾಟಿಸಿದರು. ರಾಮ್‌ಶೆಟ್ಟಿ, ಎ.ಆರ್.ಮುತ್ತಣ್ಣ,  ಎಸ್.ಜಿ.ಮೇದಪ್ಪ, ಸಿ.ಕೆ.ರೋಹಿತ್, ತೇಜಸ್ವಿ ಇತರರು ಇದ್ದರು.
ಸೋಮವಾರಪೇಟೆಯ ಒಕ್ಕಲಿಗರ ಸಮುದಾಯ ಭವನದಲ್ಲಿ ಏರ್ಪಡಿಸಿದ್ದ ಆರೋಗ್ಯ ತಪಾಸಣೆ ಶಿಬಿರವನ್ನು ಶಾಸಕ ಡಾ. ಮಂತರ್‌ಗೌಡ ಉದ್ಘಾಟಿಸಿದರು. ರಾಮ್‌ಶೆಟ್ಟಿ, ಎ.ಆರ್.ಮುತ್ತಣ್ಣ, ಎಸ್.ಜಿ.ಮೇದಪ್ಪ, ಸಿ.ಕೆ.ರೋಹಿತ್, ತೇಜಸ್ವಿ ಇತರರು ಇದ್ದರು.
Published on
ಸೋಮವಾರಪೇಟೆ: ಇಲ್ಲಿನ ಲಯನ್ಸ್ ಕ್ಲಬ್‌ನ ನೇತೃತ್ವದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆ, ತಾಲೂಕು ಒಕ್ಕಲಿಗರ ಸಂಘ, ತಾಲೂಕು ಹೋಂ ಸ್ಟೇ ಅಂಡ್ ಟೂರಿಸಂ ಅಸೋಸಿಯೇಷನ್ ಸಹಯೋಗದಲ್ಲಿ ಒಕ್ಕಲಿಗರ ಸಮುದಾಯ ಭವನದಲ್ಲಿ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಬೃಹತ್ ಶಿಬಿರ ಆಯೋಜಿಸಲಾಗಿತ್ತು.

ಶಿಬಿರ ಉದ್ಘಾಟಿಸಿ ಮಾತನಾಡಿದ ಶಾಸಕ ಡಾ. ಮಂತರ್ ಗೌಡ, ಎಲ್ಲರೂ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಒತ್ತಡದ ಜೀವನ, ಅನಿಯಮಿತ ಆಹಾರ ಪದಾರ್ಥಗಳಿಂದ ರೋಗಗಳು ಹೆಚ್ಚುತ್ತಿವೆ. ಈ ನಿಟ್ಟಿನಲ್ಲಿ ಆರೋಗ್ಯ ತಪಾಸಣೆ ಅಗತ್ಯ ಎಂದರು.

ವೈದ್ಯರ ಉತ್ತಮ ಮಾತುಗಳು, ಧೈರ್ಯವೇ ರೋಗಿಯ ಅರ್ಧ ರೋಗವನ್ನು ಗುಣಪಡಿಸುತ್ತದೆ ಎಂದ ಶಾಸಕರು, ಶಿಬಿರದಲ್ಲಿ ಭಾಗಿಯಾಗುವ ರೋಗಿಗಳಿಗೆ ಶಸ್ತ್ರ ಚಿಕಿತ್ಸೆಯ ಅಗತ್ಯವಿದ್ದರೆ, ಜಿಲ್ಲಾಸ್ಪತ್ರೆಯಲ್ಲಿ ಉಚಿತವಾಗಿ ಮಾಡಿಕೊಡಬೇಕು ಎಂದು ಮುಖ್ಯ ವೈದ್ಯಾಧಿಕಾರಿಗಳಿಗೆ ಸೂಚಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ಅಧ್ಯಕ್ಷ ರಾಮ್‌ಶೆಟ್ಟಿ ವಹಿಸಿದ್ದರು. ವೇದಿಕೆಯಲ್ಲಿ ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್.ಮುತ್ತಣ್ಣ, ಮಾಜಿ ಎಂಎಲ್‌ಸಿ ಎಸ್.ಜಿ.ಮೇದಪ್ಪ, ಹೋಂ ಸ್ಟೇ ಅಸೋಸಿಯೇಷನ್ ಅಧ್ಯಕ್ಷ ಸಿ.ಕೆ.ರೋಹಿತ್, ಲಯನ್ಸ್ ಕ್ಲಬ್‌ನ ಖಜಾಂಚಿ ತೇಜಸ್ವಿ, ಮಂಜುನಾಥ್ ಚೌಟ, ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ, ವೈದ್ಯಕೀಯ ಸ್ಥಾನೀಯ ವೈದ್ಯಾಧಿಕಾರಿ ಧನಂಜಯ್, ರಕ್ತನಿಧಿ ಘಟಕದ ಮುಖ್ಯಸ್ಥರಾದ ಡಾ. ಕರುಂಬಯ್ಯ, ಡಾ.ಪ್ರವೀಣ್, ಎಸ್.ಕೆ. ಪ್ರಸಾದ್, ಡಾ. ಸತ್ಯ, ಡಾ.ರವೀಂದ್ರ, ಡಾ. ಲಕ್ಷ್ಮೀಪ್ರಸಾದ್ ಉಪಸ್ಥಿತರಿದ್ದರು.

ಶಿಬಿರದಲ್ಲಿ ಸಾಮಾನ್ಯ ವೈದ್ಯಶಾಸ್ತ್ರ ವಿಭಾಗ, ಪ್ರಸೂತಿ ಮತ್ತು ಸ್ತ್ರೀ ರೋಗ ವಿಭಾಗ, ಕೀಲು ಹಾಗೂ ಮೂಳೆ, ನೇತ್ರ ಶಾಸ್ತ್ರ, ಇಎನ್‌ಟಿ, ಶಸ್ತ್ರ ಚಿಕಿತ್ಸಾ ವಿಭಾಗ, ಮಕ್ಕಳ ತಜ್ಞರು, ಚರ್ಮ ರೋಗ, ಎದೆ ಹಾಗೂ ಶ್ವಾಸಕೋಶ, ಮಾನಸಿಕ ಆರೋಗ್ಯ, ದಂತ ಶಾಸ್ತ್ರ, ಸಮುದಾಯ ವೈದ್ಯ ಶಾಸ್ತ್ರ, ಆಯುಷ್ ವಿಭಾಗ, ಮೆದುಳು ಆರೋಗ್ಯ ಉಪಕ್ರಮ, ಟಿಸಿಸಿ/ಎನ್‌ಸಿಡಿ ತಜ್ಞರು ಸೇರಿದಂತೆ ವಿವಿಧ ವಿಭಾಗಗಳ ತಜ್ಞ ವೈದ್ಯರು ರೋಗಿಗಳನ್ನು ತಪಾಸಣೆ ನಡೆಸಿದರು. ಕೆಲವು ರೋಗಿಗಳಿಗೆ ಸ್ಥಳದಲ್ಲಿಯೇ ಔಷಧಗಳನ್ನು ವಿತರಿಸಲಾಯಿತು. ರಕ್ತದಾನ ಶಿಬಿರದಲ್ಲಿ ಪಟ್ಟಣ ಸೇರಿದಂತೆ ಸುತ್ತಮುತ್ತಲ ಗ್ರಾಮೀಣ ಭಾಗದಿಂದ ಆಗಮಿಸಿದ್ದ ರಕ್ತದಾನಿಗಳು ರಕ್ತದಾನ ಮಾಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net