ನಿರ್ದೇಶಕರಾಗಿ ತಾಲೂಕಿನ ಹಂಗ್ರಾಪುರ ಗ್ರಾಮದ ಎಚ್.ಬಿ.ಚಂದ್ರು ಅವಿರೋಧವಾಗಿ ಆಯ್ಕೆ
ಮಳವಳ್ಳಿ: ಮಂಡ್ಯ ಜಿಲ್ಲಾ ಸಹಕಾರ ಒಕ್ಕೂಟದ ನಿರ್ದೇಶಕರಾಗಿ ತಾಲೂಕಿನ ಹಂಗ್ರಾಪುರ ಗ್ರಾಮದ ಎಚ್.ಬಿ.ಚಂದ್ರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮಂಡ್ಯ ನಗರದ ಶ್ರೀ ಲಕ್ಷ್ಮೀ ಜನಾರ್ದನ ಶಿಕ್ಷಣ ಸಮಿತಿ ಟ್ರಸ್ಟ್ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಚುನವಾವಣೆ ಪ್ರಕ್ರಿಯೆಯಲ್ಲಿ ಮಳವಳ್ಳಿ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ವತಿಯಿಂದ ಚಂದ್ರು ಹೊರತುಪಡಿಸಿ ಬೇರಾರೂ ನಾಮಪತ್ರ ಸಲ್ಲಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಅವಿರೋಧ ಆಯ್ಕೆ ನಡೆಯಿತು.
ಶಾಸಕ ಪಿ.ಎಂ. ನರೇಂದ್ರಸ್ವಾಮಿ ಅವರ ಮಾರ್ಗದರ್ಶನದಲ್ಲಿ ಅವಿರೋಧ ಆಯ್ಕೆಗೆ ಸಹಕರಿಸಿದ ಕಾಂಗ್ರೆಸ್ ಮುಖಂಡರಾದ ಆರ್.ಎನ್.ವಿಶ್ವಾಸ್, ಸಿ.ಪಿ.ರಾಜು, ಕಲ್ಕುಣಿ ದೇವರಾಜು ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಚಂದ್ರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.