ಮೀಸಲು ಪ್ರಶ್ನಿಸಿದ ಅರ್ಜಿಗಳ ವಿಚಾರಣೆ ಜೂ.15ರಿಂದ | High court

High court
High court
Published on

ಪ್ರಮುಖ ಮುಖ್ಯಾಂಶಗಳು

  • ವಾದಾಂಶಗಳನ್ನು ಸಲ್ಲಿಸಲು ಅರ್ಜಿದಾರರಿಗೆ ಹೈಕೋರ್ಟ್​ ಸೂಚನೆ
ಬೆಂಗಳೂರು: ಎಸ್​ಸಿ, ಎಸ್​ಟಿ ಮೀಸಲು ಪ್ರಮಾಣವನ್ನು ಶೇ.50ರಿಂದ 56ಕ್ಕೇರಿಸಿದ ಕಾಯ್ದೆ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಜೂ.15ರಿಂದ ಅಂತಿಮ ವಿಚಾರಣೆ ನಡೆಸುವುದಾಗಿ ಹೈಕೋರ್ಟ್​ ತಿಳಿಸಿದೆ.
ಕಾಯ್ದೆ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ವಿಭಾಗೀಯ ನ್ಯಾಯಪೀಠವು ಶುಕ್ರವಾರ ವಿಚಾರಣೆ ನಡೆಸಿತು. ಎಲ್ಲ ಅರ್ಜಿದಾರರಿಗೆ ತಮ್ಮ ವಾದಾಂಶಗಳನ್ನು ಸಲ್ಲಿಸಲು ನಿರ್ದೇಶಿಸಿ, ವಿಚಾರಣೆ ಮುಂದೂಡಿತು.
ಮಧ್ಯಂತರ ಅರ್ಜಿದಾರರೊಬ್ಬರ ಪರ ವಾದಿಸಿದ ವಕೀಲರು, ಈ ಅರ್ಜಿಗಳಿಗೆ ಸಂಬಂಧಿಸಿ ನ್ಯಾಯಾಲಯ ನೀಡಿರುವ ಮಧ್ಯಂತರ ಆದೇಶವನ್ನು ರಾಜ್ಯ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆಕ್ಷೇಪಿಸಿದರು. ಮಧ್ಯಂತರ ಆದೇಶದ ಲಾಭಕ್ಕಾಗಿ ಪದೇಪದೆ ವಿಚಾರಣೆ ಮುಂದೂಡಲು ಕೋರುತ್ತಿದ್ದಾರೆ ಎಂದರು. 
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಸರ್ಕಾರವು ಮಧ್ಯಂತರ ಆದೇಶವನ್ನು ಉಲ್ಲಂಘಿಸಿಲ್ಲ. ತನ್ನ ಅಧಿಸೂಚನೆಗಳಲ್ಲಿ ನೇಮಕಾತಿಯು ಕೋರ್ಟ್​ ಆದೇಶಕ್ಕೆ ಒಳಪಟ್ಟಿದೆ ಎಂದು ಹೇಳಿದೆ ಎಂದಿತು.
ಇದಕ್ಕೂ ಮೊದಲು ಸರ್ಕಾರದ ಪರ ವಾದಿಸಿದ ಅಡ್ವೊಕೇಟ್​ ಶಶಿಕಿರಣ್​ ಶೆಟ್ಟಿ, ಮಧ್ಯಪ್ರದೇಶದ ಪ್ರಕರಣ ಅಲ್ಲಿನ ಹೈಕೋರ್ಟ್​ಗೆ ವಾಪಸಾಗಿದೆ. ಛತ್ತೀಸ್​ಗಢಕ್ಕೆ ಸಂಬಂಧಿಸಿದ ಅರ್ಜಿ ಸುಪ್ರೀಂಕೋರ್ಟ್​ನಲ್ಲಿ ಬಾಕಿ ಇದೆ ಎಂದು ತಿಳಿಸಿದರು. 
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net