ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ

ಔರಾದ್​ ತಾಲೂಕಿನ ಧೂಪತಮಹಾಗಾಂವದಲ್ಲಿ ಭಾನುವಾರ ಆಯೋಜಿಸಿದ್ದ  ವಿಬಿ-&ಜಿ ರಾಮ್​ ಜಿ ಯೋಜನೆಯಡಿ ಕೆಲಸ ನಿರ್ವಹಿಸುವ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಲಾಯಿತು. ತಾಪಂ ಇಒ ಕಿರಣ ಪಾಟೀಲ್​,  ಆರೋಗ್ಯಾಧಿಕಾರಿ ಅನೀಲಕುಮಾರ ಎಕಲೂರೆ, ಶಿವಕುಮಾರ ಘಾಟೆ, ನಂದಕಿಶೋರ, ಮಹಾದೇವ ಡಾವರಗಾವೆ, ಪ್ರಕಾಶ, ಅಂಬಾದಾಸ ಪಾಟೀಲ್​, ಶರಣಪ್ಪ ಸಾವಳೆ ಇದ್ದರು.

Published on
ಔರಾದ್​: ಗ್ರಾಮೀಣ ಭಾಗದ ಕೂಲಿ ಕಾರ್ಮಿಕರು ವಿಬಿ-ಜಿ ರಾಮ್​ ಜಿ ಯೋಜನೆಯಡಿ ಕೆಲಸ ನಿರ್ವಹಿಸುತ್ತಿದ್ದು, ಅವರ ಆರೋಗ್ಯದ ಹಿತದೃಷ್ಟಿಯಿಂದ ಆರೋಗ್ಯ ತಪಾಸಣೆ ಮಾಡಲಾಗಿದೆ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕಿರಣ ಪಾಟೀಲ್​ ಹೇಳಿದರು.
ತಾಲೂಕಿನ ಧೂಪತಮಹಾಗಾಂವ ಭಾನುವಾರ ಆಯೋಜಿಸಿದ್ದ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದ ಅವರು, ಕೆಲಸದ ಜತೆ ಕೂಲಿ ಕಾರ್ಮಿಕರ ಆರೋಗ್ಯ ಕಾಪಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಎಲ್ಲರೂ ಈ ಶಿಬಿರದ ಸದುಪಯೋಗ ಪಡೆಯುವಂತೆ ತಿಳಿಸಿದರು.
ಸಹಾಯಕ ನಿರ್ದೇಶಕ (ಗ್ರಾ.ಉ) ಶಿವಕುಮಾರ ಘ ಂಟೆ ಮಾತನಾಡಿ, ಗ್ರಾಮೀಣ ಪ್ರದೇಶದ ಕೂಲಿ ಕಾರ್ಮಿಕರು ಕಾಮಗಾರಿ ಸ್ಥಳದಲ್ಲಿ ದೈಹಿಕ ಶ್ರಮದ ಕೆಲಸ ಮಾಡುತ್ತಿರುವುದರಿಂದ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಮುಖ್ಯವಾಗಿದೆ ಎಂದರು.
ತಾಲೂಕು ಆರೋಗ್ಯಾಧಿಕಾರಿ ಅನೀಲಕುಮಾರ ಎಕಲೂರೆ ಮಾತನಾಡಿ, ಕೂಲಿ ಕಾರ್ಮಿಕರು ತಮ್ಮ ಆರೋಗ್ಯದ ಬಗ್ಗೆ ರ್ನಿಲಕ್ಷ್ಯ ವಹಿಸಬಾರದು. ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದರಿಂದ ರಕ್ತದೊತ್ತಡ, ಮಧುಮೇಹ ಸೇರಿ ಹಲವು ಆರೋಗ್ಯ ಸಮಸ್ಯೆಗಳನ್ನು ಆರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚಲು ಸಾಧ್ಯವಾಗುತ್ತದೆ ಎಂದರು.
ಬಿಎಚ್​ಇಒ ಅನಿತಾ, ಪಿಡಿಒ ನಂದಕಿಶೋರ, ಮಹಾದೇವ ಡಾವರಗಾವೆ, ಡಿಇಒ ಪ್ರಕಾಶ, ಐಇಸಿ ಸಂಯೋಜಕ ಅಂಬಾದಾಸ ಪಾಟೀಲ್​, ಶರಣಪ್ಪ ಸಾವಳೆ ಇತರರಿದ್ದರು. ಶಿಬಿರದಲ್ಲಿ 330 ಕೂಲಿಕಾರ್ಮಿಕರ ಆರೋಗ್ಯ ತಪಾಸಣೆ ಮಾಡಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net