ಆರೋಗ್ಯವೇ ನಿಜವಾದ ಸಂಪತ್ತು

ಸುರಪುರ ತಾಲೂಕಿನ ಖಾನಾಪುರ ಎಸ್​.ಎಚ್​.ಗ್ರಾಮ ಪಂಚಾಯಿತಿ ವ್ಯಾಪ್ತಿಯ ನರೇಗಾ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ ಬುಧವಾರ ನಡೆಯಿತು. ದುರ್ಗಾಶ್ರೀ, ಮಲ್ಲಿಕಾರ್ಜುನ, ಭರತ್​, ರೇಣುಕಾ, ಸಂತೋಷ ಇತರರಿದ್ದರು.
ಸುರಪುರ ತಾಲೂಕಿನ ಖಾನಾಪುರ ಎಸ್​.ಎಚ್​.ಗ್ರಾಮ ಪಂಚಾಯಿತಿ ವ್ಯಾಪ್ತಿಯ ನರೇಗಾ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ ಬುಧವಾರ ನಡೆಯಿತು. ದುರ್ಗಾಶ್ರೀ, ಮಲ್ಲಿಕಾರ್ಜುನ, ಭರತ್​, ರೇಣುಕಾ, ಸಂತೋಷ ಇತರರಿದ್ದರು.
Published on
ಸುರಪುರ: ತಾಲೂಕಿನ ಖಾನಾಪುರ ಎಸ್​.ಎಚ್​. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ನರೇಗಾ) ಅಡಿ ಪ್ರಗತಿಯಲ್ಲಿರುವ ನಾಲೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ನರೇಗಾ ಕೂಲಿ ಕಾರ್ಮಿಕರಿಗಾಗಿ ವಿಶೇಷ ಆರೋಗ್ಯ ತಪಾಸಣೆ ಶಿಬಿರ ನಡೆಯಿತು.
ಗ್ರಾಮೀಣ ಕೂಲಿ ಕಾರ್ಮಿಕರ ಆರೋಗ್ಯ ಸಂರಕ್ಷಣೆ ಮತ್ತು ಯೋಜನೆ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಬುಧವಾರ ಹಮ್ಮಿಕೊಂಡ ಶಿಬಿರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ ಕಾರ್ಮಿಕರ ರಕ್ತದೊತ್ತಡ (ಬಿಪಿ), ರಕ್ತದಲ್ಲಿನ ಸಕ್ಕರೆ ಪ್ರಮಾಣ (ಶುಗರ್​), ದೇಹದ ತೂಕ ಸೇರಿ ವಿವಿಧ ಅಗತ್ಯ ಆರೋಗ್ಯ ತಪಾಸಣೆ ಮಾಡಿದರು. ಕಾರ್ಮಿಕರ ಆರೋಗ್ಯ ಸಮಸ್ಯೆಗಳನ್ನು ಆಲಿಸಿ, ಸೂಕ್ತ ವೈದ್ಯಕಿಯ ಸಲಹೆ ಹಾಗೂ ಮಾರ್ಗದರ್ಶನ ನೀಡಿದರು.
ನಂತರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದುರ್ಗಾಶ್ರೀ ಮಾತನಾಡಿ, ಆರೋಗ್ಯವೇ ನಿಜವಾದ ಸಂಪತ್ತು. ದೈಹಿಕವಾಗಿ ಸದೃಢವಾಗಿದ್ದರೆ ಮಾತ್ರ ಉತ್ತಮವಾಗಿ ಕೆಲಸ ಮಾಡಲು ಸಾಧ್ಯ. ಆದ್ದರಿಂದ ಕಾರ್ಮಿಕರು ಸಮತೋಲನ ಆಹಾರ ಸೇವನೆ, ವೈಯಕ್ತಿಕ ಸ್ವಚ್ಛತೆ, ನಿಯಮಿತ ಆರೋಗ್ಯ ತಪಾಸಣೆ ಹಾಗೂ ಸಾಕಷ್ಟು ನೀರು ಸೇವನೆಗೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.
ನರೇಗಾ ಯೋಜನೆಯು ಗ್ರಾಮೀಣ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವ ಮಹತ್ವದ ಯೋಜನೆಯಾಗಿದೆ. ಪ್ರತಿಯೊಬ್ಬ ಅರ್ಹ ಕುಟುಂಬವೂ ಇದರ ಸೌಲಭ್ಯ ಪಡೆದು ಆರ್ಥಿಕ ಸ್ಥಿತಿ ಸುಧಾರಿಸಿಕೊಳ್ಳಬೇಕು. ಯೋಜನೆಯಡಿ ಹೆಚ್ಚಿನ ಮಾನವ ದಿನಗಳನ್ನು ಸೃಜಿಸಿ ಗ್ರಾಮಾಭಿವೃದ್ಧಿಗೆ ಕೈ ಜೋಡಿಸಬೇಕು ಎಂದರು. ಐಇಸಿ ಸಂಯೋಜಕ ಮಲ್ಲಿಕಾರ್ಜುನ, ತಾಂತ್ರಿಕ ಸಹಾಯಕ ಭರತ್​, ಗ್ರಾಮ ಕಾಯಕ ಮಿತ್ರ ರೇಣುಕಾ, ಆರೋಗ್ಯ ಇಲಾಖೆ ಸಂತೋಷ, ಗ್ರಾಪಂ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹಾಗೂ ನರೇಗಾ ಕೂಲಿ ಕಾರ್ಮಿಕರಿದ್ದರು.
ಯೋಜನೆಯ ಸೌಲಭ್ಯ ಪಡೆದುಕೊಳ್ಳಿ
ರೋಜಗಾರ್​ ದಿವಸ ಕಾರ್ಯಕ್ರಮದಲ್ಲಿ ನರೇಗಾ ಯೋಜನೆಯಡಿ ಲಭ್ಯವಿರುವ ಸೌಲಭ್ಯಗಳು, ಉದ್ಯೋಗದ ಹಕ್ಕು, ಕೆಲಸಕ್ಕೆ ಅರ್ಜಿ ಸಲ್ಲಿಸುವ ವಿಧಾನ, ಸಕಾಲದಲ್ಲಿ ವೇತನ ಪಾವತಿ ಹಾಗೂ ಇ&ಕೆವೈಸಿ ಮಾಡಿಸುವ ಕುರಿತು ಕಾರ್ಮಿಕರಿಗೆ ಮಾಹಿತಿ ನೀಡಲಾಯಿತು. ಯೋಜನೆಯ ಸೌಲಭ್ಯ ಬಳಸಿಕೊಂಡು, ಹೆಚ್ಚಿನ ಸಂಖ್ಯೆಯಲ್ಲಿ ಕೆಲಸದಲ್ಲಿ ಭಾಗವಹಿಸುವಂತೆ ಗ್ರಾಮಸ್ಥರಿಗೆ ಎಂದು ಮನವಿ ಮಾಡಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net