ತಂಬಾಕು ಸೇವನೆಯಿಂದ ಆರೋಗ್ಯ ಸಮಸ್ಯೆ

Health problems due to tobacco useHealth problems due to tobacco use
Health problems due to tobacco useHealth problems due to tobacco use
Published on
ಶಿರಾ: ತಾಲೂಕಿನಕೊಟ್ಟ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಶುಕ್ರವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಿಶ್ವ ತಂಬಾಕು ವಿರೋಧಿ ದಿನ ಆಚರಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿದ ತಾಲೂಕು ಯೋಜನಾಧಿಕಾರಿ ಎನ್​.ರಮೇಶ್​ ಮಾತನಾಡಿ, ತಂಬಾಕು ಸೇವನೆಯಿಂದ ಆರೋಗ್ಯದಲ್ಲಿ ಗಂಭೀರ ಸಮಸ್ಯೆಗಳು ತಲೆದೋರುತ್ತವೆ.ಸಾವು- ನೋವುಗಳು ಸಂಭವಿಸುತ್ತಿವೆ. ಹಾಗಾಗಿ ಮಾರಕ ರೋಗಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶ ಎಂದರು.
ಸಂಪನ್ಮೂಲ ವ್ಯಕ್ತಿ ಮಧು ಅವರು ತಂಬಾಕು ಸೇವನೆಯಿಂದ ಉಂಟಾಗುವ ಗಂಭೀರ ಆರೋಗ್ಯ ಸಮಸ್ಯೆಗಳ ಕುರಿತು ಅರಿವು ಮೂಡಿಸಿದರು.ವ್ಯಸನದಿಂದ ದೂರವಿರಲು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು. ಮಾನಸಿಕ ದೃಢತೆಯ ಬಗ್ಗೆ ಜನರಿಗೆ ಮಾರ್ಗದರ್ಶನ ಅಗತ್ಯವಾಗಿದೆ. ಉತ್ತಮ ಆರೋಗ್ಯವೇ ಭಾಗ್ಯ, ಆರೋಗ್ಯವಂತ ಸಮಾಜ ನಿಮಾರ್ಣ ಪ್ರತಿ ವ್ಯಕ್ತಿಯ ಜವಾಬ್ದಾರಿ ಎಂದರು. ಸಮೂಹ ಸಂಪನ್ಮೂಲ ವ್ಯಕ್ತಿ ನಾರಾಯಣ ನಾಯ್ಕ್​, ಗ್ರಾಮಸ್ಥರು, ಸಂಘಟನೆ ಪದಾಧಿಕಾರಿಗಳು ಹಾಗೂ ಸ್ಥಳಿಯ ಮುಖಂಡರು ಪಾಲ್ಗೊಂಡಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net