ಕೆಂಪೇಗೌಡ ಬಸ್ ನಿಲ್ದಾಣ, ಕೆ.ಆರ್. ಮಾರುಕಟ್ಟೆ, ಶಾಂತಿನಗರ, ಜಯನಗರ, ಜೆ.ಪಿ. ನಗರ, ಜೆ.ಸಿ. ನಗರ, ಬನಶಂಕರಿ, ವಿಜಯನಗರ, ನಂದಿನಿ ಲೇಔಟ್, ಮಹಾಲಕ್ಷ್ಮೀ ಲೇಔಟ್, ಸುಬ್ರಹ್ಮಣ್ಯನಗರ, ನಾಗರಬಾವಿ, ಮೂಡಲಪಾಳ್ಯ, ಗಿರಿನಗರ, ಬಸವನಗುಡಿ, ಶೇಷಾದ್ರಿಪುರದಲ್ಲಿ ಸಾಧಾರಣ ಪ್ರಮಾಣದ ವರ್ಷಧಾರೆಯಾಯಿತು. ನೀರಿನ ರಭಸಕ್ಕೆ ಕಾರು, ಬೈಕ್ ಸವಾರರು ಸಮಸ್ಯೆ ಅನುಭವಿಸಿದರು.ರಸ್ತೆಯಲ್ಲಿ ಸರಾಗವಾಗಿ ನೀರು ಹರಿಯುವ ವ್ಯವಸ್ಥೆ ಇಲ್ಲದ ಕಾರಣ ರಸ್ತೆ ಮೇಲೆ ಅಪಾರ ಪ್ರಮಾಣದಲ್ಲಿ ನೀರು ಸಂಗ್ರಹವಾಗಿತ್ತು. ಅಂಡರ್‌ಪಾಸ್, ಜಂಕ್ಷನ್‌ಗಳಲ್ಲಿ ನೀರು ನಿಂತಿತ್ತು. ರಸ್ತೆ ಬದಿಗಳಲ್ಲಿ ಬೈಕ್ ನಿಲ್ಲಿಸಿ ಬಸ್ ನಿಲ್ದಾಣ, ಅಂಗಡಿ ಮುಂಗಟ್ಟು ಮುಂಭಾಗ ಆಶ್ರಯ ಪಡೆದರು. ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿತ್ತು. ಕಾಮಗಾರಿ ನಡೆಯುತ್ತಿದ್ದ ಸ್ಥಳಗಳಲ್ಲಿ ನೀರು ನಿಂತಿರುವುದು ಕಂಡುಬಂತು.