ರಾಜ್ಯದ ಹಲವೆಡೆ ಏ.6ವರೆಗೆ ಮಳೆ ಬಿರುಸು-rains

ಏ.6ವರೆಗೆ ಪೂರ್ವ ಮುಂಗಾರು ಮಳೆ
ಏ.6ವರೆಗೆ ಪೂರ್ವ ಮುಂಗಾರು ಮಳೆ
Published on
ಬೆಂಗಳೂರು: ರಾಜ್ಯದಲ್ಲಿ ಸುರಿಯುತ್ತಿರುವ ಪೂರ್ವ ಮುಂಗಾರು ಮಳೆ ಹಲವೆಡೆ ಬಿರುಸುಗೊಂಡಿದ್ದು, ಏ.6ವರೆಗೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನದಲ್ಲಿ ಮಾ.31ರಿಂದ ಏ.6ವರೆಗೆ ಮತ್ತು ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರದಲ್ಲಿ ಮುಂದಿನ 2 ದಿನ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗಲಿದೆ.
ಈ ವೇಳೆ ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಮಿಂಚು,ಬಿರುಗಾಳಿ ಜಾಸ್ತಿ ಕಾಣಿಸಿಕೊಳ್ಳುವುದರಿಂದ ಆರೆಂಜ್ ಅಲರ್ಟ್ ಎಚ್ಚರಿಕೆ ಕೊಟ್ಟಿರುವ ಇಲಾಖೆ, ಕೃಷಿ ಭೂಮಿಯಲ್ಲಿ ಕೆಲಸ ಮಾಡುವ ರೈತರು ಮತ್ತು ಕುರಿಗಾಹಿಗಳು ಎಚ್ಚರಿಕೆಯಿಂದ ಇರುವಂತೆ ಸಲಹೆ ಕೊಟ್ಟಿದೆ.
ಬೆಂಗಳೂರು ನಗರ, ಬೆಂ.ಗ್ರಾಮಾಂತರ, ಬೆಂ.ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಮಂಡ್ಯ, ಮೈಸೂರು ಮತ್ತು ಚಾಮರಾಜನಗರದಲ್ಲಿ ಮುಂದಿನ 48 ಗಂಟೆ ಸಾಧಾರಣ ಪ್ರಮಾಣದಲ್ಲಿ ವರ್ಷಧಾರೆಯಾಗಲಿದೆ.
ಕಲಬುರಗಿಯಲ್ಲಿ ಸೋಮವಾರ 39.2 ಡಿ.ಸೆ. ಉಷ್ಣಾಂಶ ದಾಖಲಾಗಿತ್ತು. ದಾವಣಗೆರೆಯಲ್ಲಿ ಕನಿಷ್ಠ ತಾಪಮಾನದಲ್ಲಿ 16 ಡಿ.ಸೆ. ಇತ್ತು. ಕರಾವಳಿ ಕರ್ನಾಟಕದ ಭೌಗೋಳಿಕ ಪ್ರದೇಶದಲ್ಲಿ ಬಿಸಿಲಿನ ಝಳ ಮುಂದುವರಿದಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 5 ದಿನ ಗರಿಷ್ಠ,ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net