ಸಾರ್ವಜನಿಕರ ಅಹವಾಲು ಆಲಿಸಿದ ಹೆಬ್ಬಾಳ್ಕರ್

ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಸಾರ್ವಜನಿಕರ ಅಹವಾಲು ಆಲಿಸಿದರು. ಚನ್ನರಾಜ ಹಟ್ಟಿಹೊಳಿ ಇದ್ದಾರೆ.
ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಸಾರ್ವಜನಿಕರ ಅಹವಾಲು ಆಲಿಸಿದರು. ಚನ್ನರಾಜ ಹಟ್ಟಿಹೊಳಿ ಇದ್ದಾರೆ.
Published on
ಬೆಳಗಾವಿ: ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಮ್ಮ ಗೃಹ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದರು.\
ವಿವಿಧ ಗ್ರಾಮ ಹಾಗೂ ನಗರದ ವಿವಿಧ ಭಾಗಗಳಿಂದ ಆಗಮಿಸಿದ್ದ ಜನರು ತಮ್ಮ ವೈಯಕ್ತಿಕ, ಸಾಮಾಜಿಕ ಮತ್ತು ಆಡಳಿತಾತ್ಮಕ ಸಮಸ್ಯೆಗಳನ್ನು ಗಮನಕ್ಕೆ ತಂದರು.
ಜನರಿಗೆ ಕೇವಲ ಸಾಂತ್ವನವಷ್ಟೇ ಹೇಳದೆ ಹಲವು ವಿಷಯಗಳಿಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸ್ಥಳದಲ್ಲೇ ದೂರವಾಣಿ ಮೂಲಕ ಮಾತನಾಡಿ ಸಮಸ್ಯೆ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಸರ್ಕಾರಿ ಯೋಜನೆಗಳ ಅನುಷ್ಠಾನ, ಮೂಲಸೌಕರ್ಯ ಅಭಿವೃದ್ಧಿ, ಕಂದಾಯ ಇಲಾಖೆ, ಪಿಂಚಣಿ, ಕುಡಿಯುವ ನೀರು, ರಸ್ತೆ, ಆರೋಗ್ಯ ಹಾಗೂ ಇತರೆ ಸಮಸ್ಯೆಗಳ ಕುರಿತು ಜನರು ಮನವಿ ಸಲ್ಲಿಸಿದರು.
ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net