ಡ್ರಗ್​ ಮಾಫಿಯಾ ನಿಯಂತ್ರಣಕ್ಕೆ ಸಹಕರಿಸಿ / DODABALLAPUR

ದೊಡ್ಡಬ್ಳಾಪುರದಲ್ಲಿ ಹಮ್ಮಿಕೊಂಡಿದ್ದ ಮಾದಕ ವಸ್ತುಗಳ ವಿರೋಧಿ ಸಪ್ತಾಹದ ಪ್ರಯುಕ್ತ ಆಯೋಜಿಸಿದ್ದ ಸಭೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಜಾಲಪ್ಪ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ರಾಜೇಂದ್ರ, ಪೊಲೀಸ್​ ಇನ್​ಸ್ಪೆಕ್ಟರ್​ಗಳಾದ ಅಮರೇಶ್​ ಗೌಡ, ಕಲ್ಲಪ್ಪ, ಮುತ್ತುರಾಜ್​, ಶ್ರೀನಿವಾಸ್​, ಲಕ್ಷಿ$್ಮನಾರಾಯಣ್​, ಶಬರೀಶ್​, ವಿದ್ಯಾರ್ಥಿಗಳು, ಸಿಬ್ಬಂದಿ ಇದ್ದರು.
ದೊಡ್ಡಬ್ಳಾಪುರದಲ್ಲಿ ಹಮ್ಮಿಕೊಂಡಿದ್ದ ಮಾದಕ ವಸ್ತುಗಳ ವಿರೋಧಿ ಸಪ್ತಾಹದ ಪ್ರಯುಕ್ತ ಆಯೋಜಿಸಿದ್ದ ಸಭೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಜಾಲಪ್ಪ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ರಾಜೇಂದ್ರ, ಪೊಲೀಸ್​ ಇನ್​ಸ್ಪೆಕ್ಟರ್​ಗಳಾದ ಅಮರೇಶ್​ ಗೌಡ, ಕಲ್ಲಪ್ಪ, ಮುತ್ತುರಾಜ್​, ಶ್ರೀನಿವಾಸ್​, ಲಕ್ಷಿ$್ಮನಾರಾಯಣ್​, ಶಬರೀಶ್​, ವಿದ್ಯಾರ್ಥಿಗಳು, ಸಿಬ್ಬಂದಿ ಇದ್ದರು.
Published on
ದೊಡ್ಡಬಳ್ಳಾಪುರ : ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ದುಷ್ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್​ ಅಧೀಕ್ಷಕ ಎಂ.ವಿ.ಚಂದ್ರಕಾಂತ್​ ಕರೆ ನೀಡಿದರು.
ನಗರದ ಜಾಲಪ್ಪ ಶಿಕ್ಷಣ ಸಂಸ್ಥೆಯಲ್ಲಿ ಮಾದಕ ವಸ್ತುಗಳ ವಿರೋಧಿ ಸಪ್ತಾಹದ ಪ್ರಯುಕ್ತ ಆಯೋಜಿಸಿದ್ದ 5 ಕಿ.ಮೀ. ಮ್ಯಾರಥಾನ್​ಗೆ ಚಾಲನೆ ನೀಡಿ ಮಾತನಾಡಿದರು. ಇತ್ತೀಚೆಗೆ ಮಾದಕ ವಸ್ತುಗಳಿಗೆ ಸಂಬಂಧಿಸಿದ ಪ್ರಕರಣಗಳು ಹೆಚ್ಚುತ್ತಿದ್ದು, ಡ್ರಗ್​ ಮಾಫಿಯಾ ಮಕ್ಕಳು ಹಾಗೂ ದುಡಿಯುವ ವರ್ಗವನ್ನು ಗುರಿಯಾಗಿಸಿಕೊಂಡಿದೆ. ಈ ದುಷ್ಪವೃತ್ತಿಯನ್ನು ನಿಯಂತ್ರಿಸಲು ಸಮಾಜದ ಪ್ರತಿಯೊಬ್ಬರೂ ಕೈಜೋಡಿಸಬೇಕು. ಮಾದಕ ವಸ್ತುಗಳ ಅಪಾಯದ ಬಗ್ಗೆ ಸಾಮಾಜಿಕ ಜಾಲತಾಣಗಳ ಮೂಲಕವೂ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ಮಹಿಳೆಯರ ಸುರಕ್ಷತೆಗೆ ಆಸರೆ : ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮನೆಮನೆಗೆ ಪೊಲೀಸ್​ ಕಾರ್ಯಕ್ರಮದ ಮೂಲಕ ಪೊಲೀಸ್​ ಅಧಿಕಾರಿಗಳು ಪ್ರತಿ ಮನೆಗೆ ಭೇಟಿ ನೀಡಿ ಸ್ಥಳಿಯ ಸಮಸ್ಯೆ ಆಲಿಸುತ್ತಿದ್ದಾರೆ. ಒಂಟಿ ಮನೆಗಳ ಮಾಹಿತಿ ಸಂಗ್ರಹಿಸಿ, ಮಹಿಳೆಯರ ಸುರಕ್ಷತೆಗೆ ವಿಶೇಷ ಒತ್ತು ನೀಡಲಾಗುತ್ತಿದೆ. "ಆಸರೆ' ಯೋಜನೆಯಡಿ ಒಂಟಿಯಾಗಿ ವಾಸಿಸುವ ಹಿರಿಯ ನಾಗರಿಕರಿಗೆ ರಕ್ಷಣೆ ಒದಗಿಸುವ ಜತೆಗೆ ಸರ್ಕಾರದ ಯೋಜನೆಗಳನ್ನು ತಲುಪಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಚಂದ್ರಕಾಂತ್​ ಹೇಳಿದರು. ಅಕ್ಕಪಕ್ಕದಲ್ಲಿ ಮಾದಕ ವಸ್ತುಗಳ ವ್ಯಸನಕ್ಕೆ ಒಳಗಾದವರು ಅಥವಾ ಸಹಾಯದ ಅಗತ್ಯವಿರುವವರ ಮಾಹಿತಿ ದೊರೆತರೆ ಪೊಲೀಸರಿಗೆ ತಿಳಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿದರು.
ಯುವಕರೇ ದೇಶದ ಶಕ್ತಿ :ದೊಡ್ಡಬಳ್ಳಾಪುರ ಉಪವಿಭಾಗದ ಡಿವೈಎಸ್​ಪಿ ಪಾಂಡುರಂಗ ಮಾತನಾಡಿ, ಮಾದಕ ವಸ್ತುಗಳ ಅಪಾಯದ ಕುರಿತು ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಮ್ಯಾರಥಾನ್​ ಆಯೋಜಿಸಲಾಗಿದೆ ಎಂದು ಎಸ್ಪಿ ತಿಳಿಸಿದರು. ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಇನ್​ಸ್ಪೆಕ್ಟರ್​ ಡಾ.ಎಂ.ಬಿ.ನವೀನ್​ ಕುಮಾರ್​ ಮಾತನಾಡಿ, ಮಾದಕ ವಸ್ತುಗಳು ದೇಶದ ಭವಿಷ್ಯಕ್ಕೆ ಮಾರಕವಾಗಿವೆ. ಮಕ್ಕಳು ಮತ್ತು ಯುವಜನತೆ ಯಾವುದೇ ದುಶ್ಚಟಗಳಿಗೆ ಒಳಗಾಗದಂತೆ ಎಚ್ಚರ ವಹಿಸಬೇಕು ಎಂದು ಸಲಹೆ ನೀಡಿದರು.
ಜಾಲಪ್ಪ ಶಿಕ್ಷಣ ಸಂಸ್ಥೆಯಿಂದ ಆರಂಭವಾದ ಮ್ಯಾರಥಾನ್​ ಭಗತ್​ಸಿಂಗ್​ ಕ್ರೀಡಾಂಗಣದ ಬಳಿ ಅಂತ್ಯಗೊಂಡಿತು. ಸಾಗಿತು. ನೂರಾರು ವಿದ್ಯಾರ್ಥಿಗಳು ಹಾಗೂ ಪೊಲೀಸ್​ ಸಿಬ್ಬಂದಿ ಭಾಗವಹಿಸಿದ್ದರು. ವಿಜೇತ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗೆ ಬಹುಮಾನ ನೀಡಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net