ಕೊರಟಗೆರೆ: ಎಸ್ಐಆರ್ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಅರ್ಹ ಮತದಾರರು ಹೆಸರು Desk ಹಾಗೂ ದಾಖಲೆಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂಬ ಉದ್ದೇಶದಿಂದ ಹಾಲಪ್ಪ ಪ್ರತಿಷ್ಠಾನದಿಂದ ಸೋಮವಾರ ಪಟ್ಟಣದ ಶಿವಗಂಗಾ ಚಿತ್ರಮಂದಿರದ ಮುಂಭಾಗ ಎಸ್ಐಆರ್ ಸಹಾಯ ಡೆಸ್ಕ್ ಸ್ಥಾಪಿಸಿ ಸಾರ್ವಜನಿಕರಿಗೆ ಸಮಗ್ರ ಮಾಹಿತಿ ಹಾಗೂ ಅಗತ್ಯ ನೆರವು ಒದಗಿಸಲಾಯಿತು.
ಸಹಾಯ ಡೆಸ್ಕ್ನಲ್ಲಿ ಮತದಾರರ ಪಟ್ಟಿಯಲ್ಲಿನ ಮತಗಟ್ಟೆ ಸಂಖ್ಯೆ, ಭಾಗ ಸಂಖ್ಯೆ, ಮತದಾರರ ವಿವರ, 2002ರ ದಾಖಲೆಗಳಿಗೆ ಸಂಬಂಧಿಸಿದ ಮಾಹಿತಿ ಸೇರಿ ಎಸ್ಐಆರ್ ಪ್ರಕ್ರಿಯೆ ಕುರಿತು ಸಾರ್ವಜನಿಕರಲ್ಲಿ ಇದ್ದ ಗೊಂದಲಗಳಿಗೆ ಸ್ಪಷ್ಟನೆ ನೀಡಲಾಯಿತು. ಅರ್ಜಿ ಭರ್ತಿ ಮಾಡುವ ವಿಧಾನ, ಅಗತ್ಯ ದಾಖಲೆಗಳ ಮಾಹಿತಿ ಹಾಗೂ ಬೂತ್ ಮಟ್ಟದ ಅಧಿಕಾರಿಗಳ (ಬಿಎಲ್ಒ) ವಿವರಗಳನ್ನು ಒದಗಿಸಿ ಮತದಾರರಲ್ಲಿ ಜಾಗೃತಿ ಮೂಡಿಸಲಾಯಿತು.
ಈ ವೇಳೆ ತಾಲೂಕಿನ ವಿವಿಧ ಭಾಗಗಳಿಂದ ಆಗಮಿಸಿದ್ದ ಮತದಾರರಿಗೆ ಎಸ್ಐಆರ್ ದಾಖಲೆಗಳ ಪರಿಶೀಲನೆ, ಅರ್ಜಿ ನಮೂನೆಗಳ ವಿತರಣೆ, ಬಿಎಲ್ಒಗಳ ಮಾಹಿತಿ ಸೇರಿ ವಿವಿಧ ರೀತಿಯ ತಾಂತ್ರಿಕ ಹಾಗೂ ಆಡಳಿತಾತ್ಮಕ ನೆರವು ನೀಡಲಾಯಿತು. ಸಾರ್ವಜನಿಕರು ಸಹಾಯ ಡೆಸ್ಕ್ನ ಸೇವೆಯನ್ನು ವ್ಯಾಪಕವಾಗಿ ಬಳಸಿಕೊಂಡು ತಮ್ಮ ಮತದಾರರ ಮಾಹಿತಿಯನ್ನು ಪರಿಶೀಲಿಸಿಕೊಂಡರು. Desk
ಬ್ಲಾಕ್ ಕಾಂಗ್ರೆಸ್ ಗ್ರಾಮಾಂತರ ಅಧ್ಯಕ್ಷ ಅರಕೆರೆ ಶಂಕರ್, ನಗರ ಕಾಂಗ್ರೆಸ್ ಅಧ್ಯಕ್ಷ ಅಶ್ವತ್ಥ್ ನಾರಾಯಣ, ಮಹಿಳಾ ಘಟಕದ ಅಧ್ಯಕ್ಷೆ ಜಯಮ್ಮ ಉಪಸ್ಥಿತರಿದ್ದು, ಮತದಾರರು ಎಸ್ಐಆರ್ ಪ್ರಕ್ರಿಯೆಯನ್ನು ಗಂಭೀರವಾಗಿ ಪರಿಗಣಿಸಿ ತಮ್ಮ ಹೆಸರು ಹಾಗೂ ದಾಖಲೆಗಳನ್ನು ನಿಗದಿತ ಅವಧಿಯೊಳಗೆ ಪರಿಷ್ಕರಿಸಿಕೊಳ್ಳುವಂತೆ ಮನವಿ ಮಾಡಿದರು.
ಸಹಾಯ ಡೆಸ್ಕ್ನಲ್ಲಿ ಕೋಳಾಲ ಹರೀಶ್ ಗೌಡ, ನಾರಾಯಣ, ಉಮೇಶ್, ದಿಲೀಪ್, ಅಶ್ವತ್ಥ್, ಕಾಂತರಾಜು, ಕೃಷ್ಣಮೂರ್ತಿ ಇದ್ದರು.