ಮಾನ್ವಿಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಕೆಪಿಎಸ್‌ವಿಎಸ್ ಆಯುರ್ವೇದ ಕಾಲೇಜಿನ ಪ್ರಾಚಾರ್ಯ ಡಾ.ಜೀವನೇಶ್ವರಯ್ಯ ಉದ್ಘಾಟಿಸಿದರು. ಲಯನ್ಸ್ ಕ್ಲಬ್ ಅಧ್ಯಕ್ಷ ಎಂ.ನಾಗರಾಜ್, ಶಾಂತಮೂರ್ತಿ, ರಾಮರಾಜು, ಬಸವರಾಜ್ ಮೇಟಿ, ಉಪನ್ಯಾಸಕ ಡಾ.ಸುಧೀರ್ ದೇಶಪಾಂಡೆ ಇತರರಿದ್ದರು.
ಮಾನ್ವಿ: ಪ್ರತಿನಿತ್ಯ ಯೋಗ ಅಭ್ಯಾಸ ಮಾಡುವುದರಿಂದ ಜೀವನಶೈಲಿ ಸಂಪೂರ್ಣ ಬದಲಾಗಿ ಉತ್ತಮ ಆರೋಗ್ಯ ಪಡೆಯಲು ಹಾಗೂ ಒತ್ತಡಮುಕ್ತ ಜೀವನ ನಡೆಸಬಹುದು ಎಂದು ಕೆಪಿಎಸ್‌ವಿಎಸ್ ಆಯುರ್ವೇದ ಕಾಲೇಜಿನ ಪ್ರಾಚಾರ್ಯ ಡಾ. ಜೀವನೇಶ್ವರಯ್ಯ ಹೇಳಿದರು.
ಇಲ್ಲಿನ ಧ್ಯಾನ ಮಂದಿರದ ಆವರಣದಲ್ಲಿ ಯೋಗ ಸನ್ನಿಧಿ ಜ್ಞಾನ ವಿದ್ಯಾಪೀಠ ಟ್ರಸ್ಟ್ ಹಾಗೂ ಕೆಪಿಎಸ್‌ವಿಎಸ್ ಆಯುರ್ವೇದ ಕಾಲೇಜ್ ಮತ್ತು ಆಸ್ಪತ್ರೆ, ಲಯನ್ಸ್ ಕ್ಲಬ್‌ನಿಂದ ಹಮ್ಮಿಕೊಂಡ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಯೋಗ ಗುರು ಅನ್ನದಾನಯ್ಯ ಮಾತನಾಡಿ, ಬದಲಾದ ಜೀವನ ಶೈಲಿ, ವ್ಯಾಯಾಮ ರಹಿತ ಜೀವನ ಪದ್ಧತಿಯಿಂದ ಮಹಿಳೆಯರಲ್ಲಿ ಅನೇಕ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ಕ್ಲಿನಿಕಲ್ ಯೋಗ ಥೆರಪಿ ಅಭ್ಯಾಸ ಮಾಡುವುದರಿಂದ ಮಧುಮೇಹ., ರಕ್ತದ ಒತ್ತಡದಂತಹ ಕಾಯಿಲೆಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದಕ್ಕೆ ಸಾಧ್ಯವಿದೆ.
ಕಾಯಿಲೆಮುಕ್ತ ಜೀವನಕ್ಕೆ ಯೋಗ ಸಹಕಾರಿಯಾಗಿದೆ ಎಂದರು. ಯೋಗಾಸನ ಹಾಗೂ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ನೀಡಲಾಯಿತು.
ಯೋಗ ಗುರು ಅನ್ನದಾನಯ್ಯ ಸ್ವಾಮಿ, ಡಾ.ಅರ್ಪಿತಾ ಅವರನ್ನು ಸನ್ಮಾನಿಸಲಾಯಿತು. ವೈದ್ಯರಾದ ವಿಕ್ರಮಾದಿತ್ಯ, ಜ್ಯೋತಿ, ಪ್ರಿಯಾಂಕಾ ಇತರರಿದ್ದರು.