ಕ್ಯಾಬಿನೆಟ್ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಪ್ರಮುಖ ನಾಯಕರ ಪಟ್ಟಿಯಲ್ಲಿ ಅನುಭವಿಗಳು ಮತ್ತು ಯುವ ನಾಯಕರ ದಂಡೇ ಇದೆ. ಹಿರಿಯ ನಾಯಕರಾದ ಎಂ.ಬಿ. ಪಾಟೀಲ್, ಕೆ.ಜೆ. ಜಾರ್ಜ್, ಕೆ.ಎಚ್. ಮುನಿಯಪ್ಪ, ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳಿ ಹಾಗೂ ಯು.ಟಿ. ಖಾದರ್ ಅವರಿಗೆ ಸಚಿವ ಸ್ಥಾನ ಖಚಿತವಾಗಿದೆ. ಇವರೊಂದಿಗೆ ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ, ಯತೀಂದ್ರ ಸಿದ್ದರಾಮಯ್ಯ, ಶರಣಪ್ರಕಾಶ್ ಪಾಟೀಲ್, ಬೈರತಿ ಸುರೇಶ್ ಹಾಗೂ ಈಶ್ವರ್ ಖಂಡ್ರೆ ಅವರು ಕೂಡ ಸಚಿವರಾಗಿ ಫೈನಲ್ ಲಿಸ್ಟ್‌ನಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.