ಏಪ್ರಿಲ್ 15 ರಂದು ಪಶುಪಾಲನಾ ಇಲಾಖೆಯ ನೇತೃತ್ವದಲ್ಲಿ 7,444 ಕೋಳಿಗಳು, 14 ಸಾವಿರಕ್ಕೂ ಹೆಚ್ಚು ಮೊಟ್ಟೆಗಳು ಮತ್ತು 2,250 ಕೆಜಿ ಕೋಳಿ ಆಹಾರವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲಾಗಿದೆ. ಈ ಕಾರ್ಯಾಚರಣೆಯಲ್ಲಿ ಭಾಗಿಯಾದ 10 ಸಿಬ್ಬಂದಿಯನ್ನು ಕ್ವಾರಂಟೈನ್‌ನಲ್ಲಿ ಇರಿಸಲಾಗಿದ್ದು, ಅವರಿಗೆ ‘ಒಸೆಲ್ಟಾಮಿವಿರ್’ ಔಷಧ ನೀಡಿ ವೈದ್ಯಕೀಯ ನಿಗಾ ವಹಿಸಲಾಗಿದೆ ಎಂದರು.