ಎಲ್ಲಾ ಗೊಂದಲಗಳಿಗೆ ಬ್ರೇಕ್​ ಹಾಕಲು ಹೈಕಮಾಂಡ್ ತೀರ್ಮಾನಿಸಬೇಕು: CM ಸಿದ್ದರಾಮಯ್ಯ

CM Siddaramaiah
CM Siddaramaiah
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕರಿಗೆ ಅವರ ಅಭಿಪ್ರಾಯ ತಿಳಿಸುವ ಸ್ವಾತಂತ್ರ್ಯ ಇದೆ
  • ರಾಹುಲ್ ಗಾಂಧಿ ಭೇಟಿ ಸದ್ಯಕ್ಕಿಲ್ಲ ಎಂದ ಸಿಎಂ
ಬೆಂಗಳೂರು: ಶಾಸಕರಿಗೆ ಅವರ ಅಭಿಪ್ರಾಯ ತಿಳಿಸುವ ಸ್ವಾತಂತ್ರ್ಯ ಇದೆ. ಪಕ್ಷರ ವರಿಷ್ಠರು ಏನು ಹೇಳುತ್ತಾರೆ ಎಂದು ನೋಡೋಣ ಎಂದರು. ಅಂತಿಮವಾಗಿ ಈ ಎಲ್ಲಾ ಗೊಂದಲಗಳಿಗೆ ಮುಕ್ತಾಯ ಹಾಡಲು ಹೈಕಮಾಂಡ್ ತೀರ್ಮಾನಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ,ಶಾಸಕರ ಮತ್ತೊಂದು ತಂಡ ದೆಹಲಿಗೆ ಭೇಟಿ ನೀಡಿರುವ ಬಗ್ಗೆ ಮಾತನಾಡಿ ಹೈ ಕಮಾಂಡ್ ಅವರನ್ನು ಭೇಟಿ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು.

ರಾಹುಲ್ ಗಾಂಧಿ ಭೇಟಿ ಸದ್ಯಕ್ಕಿಲ್ಲ

ಸಚಿವ ಸಂಪುಟ ವಿಸ್ತರಣೆಯನ್ನು ಪಕ್ಷದ ವರಿಷ್ಠರು ಸೂಚನೆ ನೀಡಿದಾಗ ಕೈಗೊಳ್ಳಲಾಗುವುದು ಎಂದರು. ರಾಹುಲ್ ಗಾಂಧಿಯವರನ್ನು ಭೇಟಿ ಮಾಡುವ ಇರಾದೆ ಸದ್ದಕ್ಕಿಲ್ಲ ಎಂದೂ ಕೂಡ ಅವರು ತಿಳಿಸಿದರು.

ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ

ಆಸ್ಟ್ರೇಲಿಯಾ, ಅಮೆರಿಕಾ ಹಾಗೂ ಸೌದಿ ಅರೇಬಿಯಾ ದೇಶಗಳಿಗೆ ಕರ್ನಾಟಕದ ನಂದಿನಿ ತುಪ್ಪವನ್ನು ರಫ್ತು ಮಾಡಲಾಗುತ್ತಿದೆ. ತುಪ್ಪದ ಬೇಡಿಕೆ ಹೆಚ್ಚಾಗುತ್ತಿದ್ದು, ದೇಶ ವಿದೇಶಗಳಲ್ಲಿಯೂ ಕರ್ನಾಟಕದ ನಂದಿನಿ ತುಪ್ಪಕ್ಕೆ ಬೇಡಿಕೆಯಿದೆ ಎಂದು ಸಿಎಂ ತಿಳಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net