ಸ್ಟಿಂಗ್ ಆಪರೇಷನ್ ವಿಚಾರ ಹೈಕಮಾಂಡ್ ಗಮನದಲ್ಲಿದೆ: ಪಾರದರ್ಶಕವಾಗಿ ತನಿಖೆಯಾಗಲಿ: ಮಾಜಿ ಸಿಎಂ ಸಿದ್ದರಾಮಯ್ಯ | Siddaramaiah

ರಾಜ್ಯದಲ್ಲಿ ನಡೆಯುತ್ತಿರುವ ಸ್ಟಿಂಗ್ ಆಪರೇಷನ್​ ಮತ್ತು ವಿಡಿಯೋ ವಿಚಾರ ಹೈಕಮಾಂಡ್ ಗಮನದಲ್ಲಿದ್ದು, ರಾಹುಲ್ ಗಾಂಧಿಯವರಿಗೆ ಪ್ರತ್ಯೇಕ ಭೇಟಿಗೆ ಯಾವುದೇ ಸಮಯ ಕೇಳಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸ್ಟಿಂಗ್ ಆಪರೇಷನ್ ವಿಚಾರ ಹೈಕಮಾಂಡ್ ಗಮನದಲ್ಲಿದೆ: ಪಾರದರ್ಶಕವಾಗಿ ತನಿಖೆಯಾಗಲಿ: ಮಾಜಿ ಸಿಎಂ ಸಿದ್ದರಾಮಯ್ಯ | Siddaramaiah
Published on: 

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಸ್ಟಿಂಗ್ ಆಪರೇಷನ್​ ಮತ್ತು ವಿಡಿಯೋ ವಿಚಾರ ಹೈಕಮಾಂಡ್ ಗಮನದಲ್ಲಿದ್ದು, ರಾಹುಲ್ ಗಾಂಧಿಯವರಿಗೆ ಪ್ರತ್ಯೇಕ ಭೇಟಿಗೆ ಯಾವುದೇ ಸಮಯ ಕೇಳಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಈಗಾಗಲೇ ವೀಡಿಯೋ ಬೆಳವಣಿಗೆಗಳ ಬಗ್ಗೆ ಹೈಕಮಾಂಡ್ ಗಮನದಲ್ಲಿದೆ. ತನಿಖೆ ನಡೆಯುತ್ತಿದೆ. ತೃಪ್ತಿ, ಅತೃಪ್ತಿ ಅಂತಲ್ಲ, ಪಾರದರ್ಶಕವಾಗಿ ತನಿಖೆ ನಡೆಯಬೇಕೆಂದು ಒತ್ತಾಯಿಸುತ್ತೇನೆ ಎಂದಿದ್ದಾರೆ.

Also Read
ಅಂತಿಮ ಮತದಾರರ ಪಟ್ಟಿ ಪ್ರಕಟ: ರಾಜ್ಯದಲ್ಲಿ ಮಹಿಳಾ ಮತದಾರರೇ ಹೆಚ್ಚು, 99 ಲಕ್ಷಕ್ಕೂ ಹೆಚ್ಚು ಹೆಸರುಗಳು ಔಟ್​​ ಅಂದ್ರು ಅನ್ಬುಕುಮಾರ್! CEO anbu kumar
ಸ್ಟಿಂಗ್ ಆಪರೇಷನ್ ವಿಚಾರ ಹೈಕಮಾಂಡ್ ಗಮನದಲ್ಲಿದೆ: ಪಾರದರ್ಶಕವಾಗಿ ತನಿಖೆಯಾಗಲಿ: ಮಾಜಿ ಸಿಎಂ ಸಿದ್ದರಾಮಯ್ಯ | Siddaramaiah

ಇದೇ ವೇಳೆ ಪರಮೇಶ್ವರ್ ಅವರ ಆರೋಗ್ಯದ ಬಗ್ಗೆ ಮಾತನಾಡಿರುವ ಅವರು, ಪರಮೇಶ್ವರ್​​ಗೆ ಅವರ ಹೃದಯಕ್ಕೆ ಯಾವುದೇ ಸಮಸ್ಯೆಯಿಲ್ಲ. ನಾನು ಒಂದೆರಡು ದಿನ ವಿಶ್ರಾಂತಿ ಮಾಡಪ್ಪ ಅಂತೇಳಿದ್ದೇನೆ. ಅವರ ಆರೋಗ್ಯ ಸ್ಥಿರವಾಗಿದೆ. ಪಲ್ಸ್ ರೇಟ್ ಜಾಸ್ತಿಯಾಗಿತ್ತು ಅಂತ ಅಡ್ಮಿಟ್ ಆಗಿದ್ದರು. ಈಗ ನಾರ್ಮಲ್ ಆಗಿದ್ದಾರೆ ಎಂದು ತಿಳಿಸಿದ್ದಾರೆ.

ಪರಮೇಶ್ವರ್ ಆರೋಗ್ಯದಲ್ಲಿ ಏರುಪೇರು

ಮಂಗಳವಾರ(ಅ. 27) ಬ್ಯಾಡ್ಮಿಂಟನ್ ಪಂದ್ಯಾವಳಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರ ಆರೋಗ್ಯದಲ್ಲಿ ಇದ್ದಕ್ಕಿದ್ದಂತೆ ಏರುಪೇರು ಉಂಟಾಗಿದ್ದು, ತಕ್ಷಣವೇ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಮಾತನಾಡಿರುವ ವೈದೇಹಿ ಆಸ್ಪತ್ರೆಯ ವೈದ್ಯರು, ಡಿಸಿಎಂ ಪರಮೇಶ್ವರ್ ಅವರ ಹೃದಯ ಬಡಿತದ ಪ್ರಮಾಣ ಏಕಾಏಕಿ ಹೆಚ್ಚಾಗಿದ್ದರಿಂದ ಅವರನ್ನು ಆಸ್ಪತ್ರೆಗೆ ಕರೆತರಲಾಗಿತ್ತು. ಪ್ರಸ್ತುತ ಅವರ ಆರೋಗ್ಯ ಸಂಪೂರ್ಣ ನಾರ್ಮಲ್ ಆಗಿದೆ. ಇಸಿಜಿ ಸೇರಿದಂತೆ ಎಲ್ಲಾ ವೈದ್ಯಕೀಯ ಪರೀಕ್ಷಾ ವರದಿಗಳು ಸಾಮಾನ್ಯವಾಗಿದ್ದು, ಅವರು ಸ್ವತಃ ಊಟ ಮಾಡಿದ್ದಾರೆ. ಅಲ್ಲದೆ, ಇನ್ನು ಎರಡು ಗಂಟೆಗಳಲ್ಲಿ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುವುದು ಎಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net