ಆರೆಸ್ಸೆಸ್ ಕಾರ್ಯಕರ್ತ ಆರ್. ರುದ್ರೇಶ್ ಅವರು ಶಿವಾಜಿನಗರದಲ್ಲಿ ನಡೆದ ಪಥಸಂಚಲನವನ್ನು ಮುಗಿಸಿ ಮನೆಗೆ ಹಿಂತಿರುಗುತ್ತಿದ್ದಾಗ, ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಅವರನ್ನು ಅಡ್ಡಗಟ್ಟಿ ಹಾಡಹಗಲೇ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದರು. ಕೊಲೆಯಾದ ಕೆಲ ದಿನಗಳ ನಂತರ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದರು. ಇರ್ಫಾನ್ ಪಾಷಾನನ್ನು ಎ1 ಆರೋಪಿ ಎಂದು ಗುರುತಿಸಲಾಗಿದೆ. ಈ ಪ್ರಕರಣವು ಕೋಮು ಸೂಕ್ಷ್ಮತೆ ಹೊಂದಿದ್ದರಿಂದ ಮತ್ತು ಭಯೋತ್ಪಾದನೆಯ ಶಂಕೆ ಇದ್ದ ಕಾಋಣ ತನಿಖೆಯನ್ನು ಎನ್ಐಎಗೆ ವಹಿಸಿ ಕೇಂದ್ರ ಸರ್ಕಾರ ಆದೇಶಿಸಿತ್ತು. ಪ್ರಕರಣದಲ್ಲಿ ಚಾರ್ಜ್ಶೀಟ್ ಸಲ್ಲಿಕೆಯಾಗಿದ್ದು, ಎನ್ಐಎ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ಪ್ರಗತಿಯಲ್ಲಿದೆ. #high court