ಅರ್ಜಿದಾರನ ಪರ ವಾದಿಸಿದ್ದ ವಕೀಲರು, ಆರೋಪಿಯು ತೀವ್ರ ಖಿನ್ನತೆಗೆ ಒಳಗಾಗಿದ್ದ ಹಾಗೂ ತನಗೆ ತಾನೇ ಗಾಯ ಮಾಡಿಕೊಂಡಿದ್ದ ಕಾರಣ ನ್ಯಾಯಾಲಯಕ್ಕೆ ಹಾಜರಾಗಲು ಅಥವಾ ಜಾಮೀನುದಾರರನ್ನು ಒದಗಿಸಲು ಸಾಧ್ಯವಾಗಿರಲಿಲ್ಲ. ಈ ಬಾರಿ ಅವಕಾಶ ನೀಡಿದರೆ ನ್ಯಾಯಾಲಯದ ಎಲ್ಲಾ ಷರತ್ತುಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು ಎಂದು ಕೋರಿದ್ದರು. ಇದನ್ನು ಹೈಕೋರ್ಟ್ ಪರಿಗಣಿಸಿದೆ. ಆದರೆ, ಇನ್ನೊಮ್ಮೆ ಷರತ್ತು ಉಲ್ಲಂಘಿಸಿದರೆ ಆತನ ಜಾಮೀನು ರದ್ದುಪಡಿಸುವ ಅಧಿಕಾರ ವಿಚಾರಣಾ ನ್ಯಾಯಾಲಯಕ್ಕೆ ಇದೆ ಎಂದು ಸ್ಪಷ್ಟಪಡಿಸಿದೆ.