ಅನರ್ಹರಾಗಿರುವ ಉಪನ್ಯಾಸಕರಿಗೆ ಹೈಕೋರ್ಟ್​ ರಿಲೀಫ್| High court

High court
High court
Published on

ಬೆಂಗಳೂರು: 

ಕಳೆದ ಶೈಕ್ಷಣಿಕ ಸಾಲಿನಲ್ಲಿ ನಕಲಿ ಪಿಎಚ್​ಡಿ, ಎನ್​ಇಟಿ ಮತ್ತು ಎಸ್​ಎಲ್​ಇಟಿ ಪ್ರಮಾಣಪತ್ರ ಇತ್ಯಾದಿ ದಾಖಲೆಗಳನ್ನು ಸಲ್ಲಿಸಿ ಆರೋಪದಲ್ಲಿ ಈ ವರ್ಷದ ಅತಿಥಿ ಉಪನ್ಯಾಸಕರ ಕೌನ್ಸೆಲಿಂಗ್​ ಪ್ರಕ್ರಿಯೆಯಿಂದ ಅನರ್ಹಗೊಂಡಿದ್ದ ಅಭ್ಯರ್ಥಿಗಳಿಗೆ ಹೈಕೋರ್ಟ್​ನಿಂದ ಮಧ್ಯಂತರ ರಿಲೀಪ್​ ಸಿಕ್ಕಿದೆ. 

ಅನರ್ಹಗೊಳಿಸಿದ್ದ ಸರ್ಕಾರದ ನಿರ್ಧಾರ ಪ್ರಶ್ನಿಸಿ 31 ಉಪನ್ಯಾಸಕರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಎಲ್ಲ ಅರ್ಜಿಗಳನ್ನು ಒಟ್ಟಾಗಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಶೋಕ್​ ಎಸ್​. ಕಿಣಗಿ ಅವರಿದ್ದ ಏಕಸದಸ್ಯ ನ್ಯಾಯಪೀಠ, ಪ್ರಕ್ರಿಯೆ ಪಾಲಿಸಿಲ್ಲ ಎಂದು ಜು. 29ರಂದು ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಿತ್ತು. ಸೋಮವಾರ (ಆ. 3) ನಡೆದ ವಿಚಾರಣೆಯಲ್ಲಿ ಸಾಮಾನ್ಯ ಕೌನ್ಸೆಲಿಂಗ್​ ಪ್ರಕ್ರಿಯೆ ಪೂರ್ಣಗೊಂಡ ನಂತರ, ಪಿಎಚ್​ಡಿ ಹೊಂದಿರುವ ಅರ್ಜಿದಾರರಿಗೂ ಕೌನ್ಸೆಲಿಂಗ್​ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದು ಎಂದು ಸರ್ಕಾರಿ ವಕೀಲರು ನ್ಯಾಯಪೀಠಕ್ಕೆ ಮಾಹಿತಿ ನೀಡಿದ್ದಾರೆ.
ಇದರ ಆಧಾರದಲ್ಲಿ ಅಧಿಕೃತ ಜ್ಞಾಪನ ಪತ್ರ ಹೊರಡಿಸಿರುವ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರು, ನ್ಯಾಯಲಯದ ಅಂತಿಮ ತೀರ್ಪಿಗೆ ಒಳಪಟ್ಟು, ಅರ್ಜಿದಾರರನ್ನು ಪ್ರಸ್ತುತ ಶೈಕ್ಷಣಿಕ ಸಾಲಿನ ಕೌನ್ಸೆಲಿಂಗ್​ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅನುಮತಿಸಿ ಆದೇಶಿಸಿದ್ದಾರೆ. 

ಪ್ರಕರಣದ ಹಿನ್ನೆಲೆ:

2025&26ನೇ ಸಾಲಿನಲ್ಲಿ ಆನ್​ಲೈನ್​ ಕೌನ್ಸೆಲಿಂಗ್​ ಮೂಲಕ ಆಯ್ಕೆಯಾಗಿದ್ದ ಅತಿಥಿ ಉಪನ್ಯಾಸಕರು ಸಲ್ಲಿಸಿದ್ದ ದಾಖಲೆಗಳನ್ನು ಇಲಾಖೆಯ ನಿಯಮಾವಳಿಗಳಂತೆ ಪರಿಶೀಲಿಸಲಾಗಿತ್ತು. ಪರಿಶೀಲನೆ ವೇಳೆ ನಕಲಿ ದಾಖಲೆ ಸಲ್ಲಿಕೆ ಕಂಡುಬಂದ ಹಿನ್ನೆಲೆಯಲ್ಲಿ ಅಭ್ಯರ್ಥಿಗಳನ್ನು ಭವಿಷ್ಯದ ಆಯ್ಕೆ ಪ್ರಕ್ರಿಯೆಯಿಂದ ರ್ನಿಬಂಧಿಸಿ, ಕ್ರಿಮಿನಲ್​ ಪ್ರಕರಣ ದಾಖಲಿಸಲು ಆದೇಶಿಸಲಾಗಿತ್ತು. ಈ ಆದೇಶವನ್ನು ಅರ್ಜಿದಾರರು ಹೈಕೋರ್ಟ್​ನಲ್ಲಿ ಪ್ರಶ್ನಿಸಿದ್ದಾರೆ. 
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net