ಬೆಂಗಳೂರು: ಹೊಳೆನರಸೀಪುರ ಶಾಸಕ ಎಚ್.ಡಿ. ರೇವಣ್ಣ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಹಿಳೆಯ ಘನತೆಗೆ ದಕ್ಕೆ ತಂದಿರುವ ಆರೋಪವನ್ನು ವಿಚಾರಣೆಗೆ ಪರಿಗಣಿಸಿದ ವಿಚಾರಣಾ ನ್ಯಾಯಾಲಯದ ಕ್ರಮವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಆದರೆ, ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಸೂಕ್ತ ಆದೇಶ ನೀಡುವಂತೆ ನಿರ್ದೇಶನ ನೀಡಿ ವಿಚಾರಣಾ ನ್ಯಾಯಾಲಯಕ್ಕೆ ಪ್ರಕರಣವನ್ನು ಹಿಂತಿರುಗಿಸಿದೆ.