ನ್ಯಾಯಾಲಯದ ಆದೇಶಗಳು ಆಡಳಿತಾತ್ಮಕ ಕಾರಣಗಳಿಗಾಗಿ ಕೇವಲ ಕಾಗದದ ಮೇಲೆ ಉಳಿಯಬಾರದು. ಅದನ್ನು ಕಾರ್ಯರೂಪಕ್ಕೆ ತರುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ. ಅಲ್ಲದೆ, ನೆಪ ಹೇಳಿ ಆದೇಶ ಜಾರಿಗೆ ಅಡ್ಡಿಪಡಿಸಬಾರದು. ನ್ಯಾಯಾಂಗದ ಆದೇಶಗಳನ್ನು ಜಾರಿಗೊಳಿಸುವ ಹೊಣೆಗಾರಿಕೆ ಕೂಡ ಸರ್ಕಾರದ ಪ್ರಾಧಿಕಾರಗಳಿಗಿದೆ. ಆದರೆ ಆಡಳಿತಾತ್ಮಕ ಶಿಷ್ಟಾಚಾರದ ಕೊರತೆಯಿಂದ ಸಮಸ್ಯೆಗಳಾಗುತ್ತಿವೆ. ಅದನ್ನು ಸರಿಪಡಿಸಲು ಮಾರ್ಗಸೂಚಿ ಪ್ರಕಟಿಸಲಾಗಿದೆ ಎಂದು ತೀರ್ಪಿನಲ್ಲಿ ಹೇಳಲಾಗಿದೆ.