ಡಿಕೆಶಿ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್​ ತಡೆ

DK Shivakumar
DK Shivakumar
Published on
ಬೆಂಗಳೂರು: "ನಾನು ಕರಸೇವಕ' ಅಭಿಯಾನದಲ್ಲಿ ತೊಡಗಿದ್ದ ಬಿಜೆಪಿ ನಾಯಕರ ವಿರುದ್ಧ ಆಕ್ಷೇಪಾರ್ಹ ಪೋಸ್ಟ್​ಗಳನ್ನು ಸಾಮಾಜಿಕ ಜಾಲಾತಾಣದಲ್ಲಿ ಹಂಚಿಕೊಂಡ ಆರೋಪದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್​ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಹೈಕೋರ್ಟ್​ ತಡೆ ನೀಡಿದೆ. 
ನಗರದ ಹೈಗ್ರೌಂಡ್​ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದುಕೋರಿ ಡಿಕೆಶಿ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್​. ಸುನಿಲ್​ ದತ್​ ಯಾದವ್​ ಅವರಿದ್ದ ಏಕಸದಸ್ಯ ನ್ಯಾಯಪೀಠವು ಈ ಆದೇಶ ನೀಡಿದೆ. 
ಅರ್ಜಿದಾರರ ಪರ ವಕೀಲರು ವಾದಿಸಿ, ಬಿಜೆಪಿ ನಾಯಕರು ಲಂಚ ಪಡೆದಿದ್ದಾರೆ ಎಂದು ಆರೋಪಿಸುವ ಚಿತ್ರವನ್ನು ಕಾಂಗ್ರೆಸ್​ನ ಅಧಿಕೃತ ಖಾತೆಯಿಂದ ಟ್ವೀಟ್​ ಮಾಡಲಾಗಿದೆ. ಈ ಬಗ್ಗೆ ಬಿಜೆಪಿ ಕಾನೂನು ಟಕ ನೀಡಿದ್ದ ಖಾಸಗಿ ದೂರನ್ನು ಪರಿಗಣಿಸಿ ಪ್ರಕರಣ ದಾಖಲಿಸುವಂತೆ ವಿಚಾರಣಾಧೀನ ನ್ಯಾಯಲಯ ಆದೇಶಿಸಿದೆ. ಇದಕ್ಕೆ ಸುಪ್ರೀಂ ಕೋರ್ಟ್​ ಪ್ರಿಯಾಂಕ ಶ್ರೀವಾಸ್ತವ ಪ್ರಕರಣದಲ್ಲಿ ನೀಡಿದ ಮಾರ್ಗಸೂಚಿ ಪಾಲಿಸಿದೆ ಎಂದು ನ್ಯಾಯಾಲಯ ಹೇಳಿದೆ. ಆದರೆ, ಅಲ್ಲಿ ಸೂಚಿಸಿರುವ ಪ್ರಕ್ರಿಯೆಗಳನ್ನು ಸರಿಯಾಗಿ ಪಾಲಿಸಲಾಗಿಲ್ಲ ಎಂದು ಆಕ್ಷೇಪಣೆಗಳನ್ನು ಸಲ್ಲಿಸಿದರು. ರಾಜ್ಯ ಸರ್ಕಾರದ ಪರ ಹಾಜರಿದ್ದ ವಕೀಲರು ಕೂಡ ಇದನ್ನು ಅನುಮೋದಿಸಿದರು. ಇದನ್ನು ಆಲಿಸಿದ ನ್ಯಾಯಪೀಠವು, ಪ್ರಕರಣಕ್ಕೆ ತಡೆ ನೀಡಿ ವಿಚಾರಣೆ ಮೂಂದೂಡಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net