ಬೀದರ್ನ ಕೌಟುಂಬಿಕ ನ್ಯಾಯಾಲಯ ನೀಡಿದ್ದ ವಿಚ್ಛೇದನ ಆದೇಶ ಪ್ರಶ್ನಿಸಿ ಪತ್ನಿ ಸಲ್ಲಿಸಿದ್ದ ಮೇಲ್ಮನವಿಯನ್ನು ಧಾರವಾಡ ಪೀಠದಲ್ಲಿ ವಿಚಾರಣೆ ನಡೆಸಿದ ಪುರಸ್ಕರಿಸಿರುವ ನ್ಯಾಯಮೂರ್ತಿಗಳಾದ ಸೂರಜ್ ಗೋವಿಂದರಾಜ್ ಮತ್ತು ಚಿಲ್ಲಾಕೂರು ಸುಮಲತಾ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಕೌಟುಂಬಿಕ ನ್ಯಾಯಾಲಯದ ಆದೇಶವು ಸಾಾಧಾರಗಳ ಕೊರತೆ ಮತ್ತು ಏಕಪಯ ಮೌಲ್ಯಮಾಪನದಿಂದ ಕೂಡಿದೆ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಪೀಠ, ಪ್ರಕರಣವನ್ನು ಮರುವಿಚಾರಣೆಗಾಗಿ ವಾಪಸ್ ಕಳುಹಿಸಿದೆ.