ಗ್ರಾಮಗಳಲ್ಲಿ ಮೂಲಸೌಕರ್ಯಕ್ಕೆ ಹೆಚ್ಚಿನ ಆದ್ಯತೆ

ಪಿರಿಯಾಪಟ್ಟಣ ತಾಲೂಕಿನ ಪಾರೆಕೊಪ್ಪಲು ಗ್ರಾಮದಲ್ಲಿ ಶಾಸಕ ಕೆ.ವೆಂಕಟೇಶ್ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ನಿತಿನ್ ವೆಂಕಟೇಶ್, ಬಿ.ಜೆ.ಬಸವರಾಜ್, ರಹಮತ್ ಜಾನ್ ಬಾಬು, ಸಿ.ತಮ್ಮಣ್ಣಯ್ಯ ಇತರರು ಇದ್ದಾರೆ.
ಪಿರಿಯಾಪಟ್ಟಣ ತಾಲೂಕಿನ ಪಾರೆಕೊಪ್ಪಲು ಗ್ರಾಮದಲ್ಲಿ ಶಾಸಕ ಕೆ.ವೆಂಕಟೇಶ್ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ನಿತಿನ್ ವೆಂಕಟೇಶ್, ಬಿ.ಜೆ.ಬಸವರಾಜ್, ರಹಮತ್ ಜಾನ್ ಬಾಬು, ಸಿ.ತಮ್ಮಣ್ಣಯ್ಯ ಇತರರು ಇದ್ದಾರೆ.
Published on
ಪಿರಿಯಾಪಟ್ಟಣ: ತಾಲೂಕಿನ ಯಾವುದೇ ಗ್ರಾಮ ಮೂಲ ಮೂಲಸೌಲಭ್ಯದಿಂದ ವಂಚಿತವಾಗಬಾರದು ಎಂಬ ಉದ್ದೇಶದಿಂದ ಪಕ್ಷಾತೀತವಾಗಿ ಎಲ್ಲ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ ಎಂದು ಶಾಸಕ ಕೆ.ವೆಂಕಟೇಶ್ ಹೇಳಿದರು.

ತಾಲೂಕಿನ ವಿವಿಧ ಗ್ರಾಮಗಳಲ್ಲಿ ಹಲವು ಕಾಮಗಾರಿಗಳಿಗೆ ಶುಕ್ರವಾರ ಭೂಮಿಪೂಜೆ ನೆರವೇರಿಸಿ ಪಾರೆಕೊಪ್ಪಲು ಗ್ರಾಮದಲ್ಲಿ ಮಾತನಾಡಿದರು.
ಜನರ ಆಶೋತ್ತರಗಳಿಗೆ ಅನುಗುಣವಾಗಿ ತಾಲೂಕಿನ ಅಭಿವೃದ್ಧಿಗೆ ಪ್ರಥಮ ಆದ್ಯತೆ ನೀಡಿದ್ದೇನೆ. ಶಾಶ್ವತ ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಿದ್ದೇನೆ. ಜನರು ನನಗೆ ನೀಡಿರುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತಿದ್ದು, ಆಡಳಿತ ವ್ಯವಸ್ಥೆಯಲ್ಲಿ ಜನರಿಗೆ ನ್ಯಾಯ ದೊರಕಿಸುವ ಕಾರ್ಯಕ್ಕೆ ಸದಾ ಬದ್ಧನಾಗಿದ್ದೇನೆ ಎಂದರು.

ಪ್ರತಿಯೊಂದು ಗ್ರಾಮಕ್ಕೂ ಉತ್ತಮ ರಸ್ತೆ ಚರಂಡಿ ವ್ಯವಸ್ಥೆ, ಕುಡಿಯುವ ನೀರಿನ ಸೌಲಭ್ಯ, ಸಮರ್ಪಕವಾದ ವಿದ್ಯುತ್ ಸರಬರಾಜು ಸೇರಿದಂತೆ ಮೂಲಸೌಲಭ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದರು.

ದಸಂಸ ಮುಖಂಡ ಸಿ. ತಮ್ಮಣ್ಣಯ್ಯ ಮಾತನಾಡಿ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ತಂದು ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಿರುವ ಶಾಸಕ ಕೆ.ವೆಂಕಟೇಶ್ ಅವರು ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಜನನಾಯಕನಾಗಿ ಗುರುತಿಸಿಕೊಂಡಿದ್ದಾರೆ ಎಂದರು. ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿರುವ ಶಾಸಕ ಕೆ.ವೆಂಕಟೇಶ್ ಅವರಿಗೆ ರಾಜ್ಯ ಸಚಿವ ಸಂಪುಟದ 2ನೇ ಹಂತದ ವಿಸ್ತರಣೆಯಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಹಮತ್ ಜಾನ್ ಬಾಬು ಮಾತನಾಡಿ, ಸರ್ಕಾರದ ಜನಪರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಶಾಸಕ ಕೆ.ವೆಂಕಟೇಶ್ ಅವರು ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿ ಹಲವು ಶಾಶ್ವತ ಯೋಜನೆ ಜಾರಿಗೊಳಿಸಿದ್ದಾರೆ. ಇದರಿಂದ ಕ್ಷೇತ್ರದ ಅಭಿವೃದ್ಧಿಗೆ ಹೊಸ ದಿಕ್ಕು ದೊರೆತಿದ್ದು, ಜನರ ವಿಶ್ವಾಸವನ್ನು ಗಳಿಸಿದ್ದಾರೆ ಎಂದರು.

ಶಾಸಕರು ತಾಲೂಕಿನ ವಿವಿಧ ಗ್ರಾಮಗಳಾದ ಕೆಳಗನಹಳ್ಳಿ, ಎನ್ ಶೆಟ್ಟಿಹಳ್ಳಿ , ನಿಲಂಗಾಲ, ದೊರೆಕೆರೆ, ಚಿಕ್ಕ ಬೇಲಾಳು, ಸುಂಡವಾಳು, ಕಿನಹಳಲ್ಲಿ, ಕೃಷ್ಣಪುರ, ಅಂಕನಹಳ್ಳಿ, ಪಾರೆ ಕೊಪ್ಪಲು ಗ್ರಾಮಗಳಲ್ಲಿ ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಭೂಮಿಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್, ಯೂತ್ ಕಾಂಗ್ರೆಸ್ ಅಧ್ಯಕ್ಷ ರಘು, ಪ್ರಚಾರ ಸಮಿತಿ ಅಧ್ಯಕ್ಷ ಪುಟ್ಟರಾಜು, ಮುಖಂಡ ಬಿ.ಜೆ.ಬಸವರಾಜ್, ತಹಸೀಲ್ದಾರ್ ನಿಸರ್ಗ ಪ್ರಿಯ, ಲೋಕೋಪಯೋಗಿ ಇಲಾಖೆ ಎಇಇ ಯೋಗಾನಂದ, ಎಇ ದಿನೇಶ್, ಲ್ಯಾಂಡ್ ಆರ್ಮಿ ಎಂಜಿನಿಯರ್ ವಿಜಯ್, ಲವಕುಮಾರ್, ಪಶು ಸಂಗೋಪನೆ ಇಲಾಖೆ ಸಹಾಯಕ ನಿರ್ದೇಶಕ ಡಾ.ಸೋಮಯ್ಯ, ಸಿಡಿಪಿಒ ವೀಣಾ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net