ಪ್ರೌಢ ಶಾಲಾ ಶಿಕ್ಷಕರ ಬಡ್ತಿ ಪರೀಕ್ಷೆ: ಫಲಿತಾಂಶ ಪ್ರಕಟ, ಲಿಂಕ್‌ಗೆ ಇಲ್ಲಿ ಕ್ಲಿಕ್ ಮಾಡಿ
ಶಾಲಾ ಶಿಕ್ಷಣ ಇಲಾಖೆಯ ಕೇಂದ್ರೀಕೃತ ದಾಖಲಾತಿ ಘಟಕ
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಫಲಿತಾಂಶವನ್ನು ಸೋಮವಾರ ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.
ತಮ್ಮ ಅರ್ಜಿ ಸಂಖ್ಯೆ ಮತ್ತು ಜನ್ಮದಿನಾಂಕವನ್ನು ನಮೂದಿಸಿ ಫಲಿತಾಂಶವನ್ನು ವೀಕ್ಷಿಸಬಹುದು
ಮೇ 26ರಿಂದ 30ರವರೆಗೆ ವಿವಿಧ 8 ಅವಧಿಯಲ್ಲಿ ಅರ್ಹತಾ ಪರೀಕ್ಷೆಗಳನ್ನು ನಡೆಸಲಾಗಿತ್ತು.
ಬೆಂಗಳೂರು:
ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕ ವೃಂದದಿಂದ ಸರ್ಕಾರಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕ ವೃಂದದ ಹುದ್ದೆಗೆ ಬಡ್ತಿ ನೀಡುವುದಕ್ಕಾಗಿ ನಡೆಸಿದ ಅರ್ಹತಾ ಪರೀಕ್ಷೆಯ ಫಲಿತಾಂಶವನ್ನು ಶಾಲಾ ಶಿಕ್ಷಣ ಇಲಾಖೆಯ ಕೇಂದ್ರೀಕೃತ ದಾಖಲಾತಿ ಘಟಕವು ಪ್ರಕಟಿಸಿದೆ.
ಫಲಿತಾಂಶವನ್ನು ಸೋಮವಾರ ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಶಾಲಾ ಶಿಕ್ಷಣ ಇಲಾಖೆಯ ಕೇಂದ್ರೀಕೃತ ದಾಖಲಾತಿ ಘಟಿಕದ ವೆಬ್‌ಸೈಟ್ ಲಿಂಕ್ http://sts.karnataka.gov.in/GPSTRNHK
ನಲ್ಲಿ ತಮ್ಮ ಅರ್ಜಿ ಸಂಖ್ಯೆ ಮತ್ತು ಜನ್ಮದಿನಾಂಕವನ್ನು ನಮೂದಿಸಿ ಫಲಿತಾಂಶವನ್ನು ವೀಕ್ಷಿಸಬಹುದು ಎಂದು ದಾಖಲಾತಿ ಘಟಕದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಮೇ 26ರಿಂದ 30ರವರೆಗೆ ವಿವಿಧ 8 ಅವಧಿಯಲ್ಲಿ ಅರ್ಹತಾ ಪರೀಕ್ಷೆಗಳನ್ನು ನಡೆಸಲಾಗಿತ್ತು.