ತಾಂತ್ರಿಕ ಶಿಕ್ಷಣ ಸುಧಾರಣೆಗೆ ಸಮಿತಿ ರಚಿಸಿದ ಉನ್ನತ ಶಿಕ್ಷಣ ಇಲಾಖೆ

 ಡಾ. ಎಸ್. ಸಡಗೋಪನ್ ಅಧ್ಯಕ್ಷತೆಯಲ್ಲಿ ಸಮಿತಿ
ಡಾ. ಎಸ್. ಸಡಗೋಪನ್ ಅಧ್ಯಕ್ಷತೆಯಲ್ಲಿ ಸಮಿತಿ
Published on

ಪ್ರಮುಖ ಮುಖ್ಯಾಂಶಗಳು

  • ಯುವಿಸಿಇ ನಿರ್ದೇಶಕರು, ಉನ್ನತ ಶಿಕ್ಷಣ ಇಲಾಖೆಯ ಉಪಾಧ್ಯಕ್ಷರು, ಕೆಇಎ ಆಡಳಿತಾಧಿಕಾರಿ ಸೇರಿ ಇತರೆ ಒಂಭತ್ತು ಮಂದಿಯನ್ನು ಸದಸ್ಯರಾಗಿ ನೇಮಿಸಲಾಗಿದೆ.
  • ಸಮಿತಿಯು ಒಂದು ತಿಂಗಳಿನಲ್ಲಿ ವರದಿ ನೀಡುವಂತೆ ತಿಳಿಸಲಾಗಿದೆ.
  • ಮೂಲ ಇಂಜಿನಿಯರಿಂಗ್ ಕೋರ್ಸ್‌ಗಳ ಪಠ್ಯಕ್ರಮವನ್ನು ಪ್ರಸ್ತುತ ಕಾಲಘಟ್ಟದ ಕೈಗಾರಿಕಾ ಹಾಗೂ ಉದ್ಯೋಗ ಅವಶ್ಯಕತೆಗಳಿಗೆ ತಕ್ಕಂತೆ ಪರಿಷ್ಕರಿಸುವುದು,
ಬೆಂಗಳೂರು: ತಾಂತ್ರಿಕ ಶಿಕ್ಷಣದಲ್ಲಿ ಅಗತ್ಯ ಸುಧಾರಣೆ ತರಲು ಮುಂದಾಗಿರುವ ಉನ್ನತ ಶಿಕ್ಷಣ ಇಲಾಖೆಯು, ಐಐಐಟಿ ಬೆಂಗಳೂರು ನಿವೃತ್ತ ನಿರ್ದೇಶಕ ಡಾ. ಎಸ್. ಸಡಗೋಪನ್ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಆದೇಶ ಹೊರಡಿಸಿದೆ.
ಐಐಎಸ್‌ಸಿ ಪ್ರೊ. ಜಗದೀಶ್, ವಿಟಿಯು ಕುಲಪತಿ, ಯುವಿಸಿಇ ನಿರ್ದೇಶಕರು, ಉನ್ನತ ಶಿಕ್ಷಣ ಇಲಾಖೆಯ ಉಪಾಧ್ಯಕ್ಷರು, ಕೆಇಎ ಆಡಳಿತಾಧಿಕಾರಿ ಸೇರಿ ಇತರೆ ಒಂಭತ್ತು ಮಂದಿಯನ್ನು ಸದಸ್ಯರಾಗಿ ನೇಮಿಸಲಾಗಿದೆ. ಸಮಿತಿಯು ಒಂದು ತಿಂಗಳಿನಲ್ಲಿ ವರದಿ ನೀಡುವಂತೆ ತಿಳಿಸಲಾಗಿದೆ.

ಸಮಿತಿ ಕೆಲಸವೇನು?

ಕಂಪ್ಯೂಟರ್ ಸೈನ್ಸ್ ಹಾಗೂ ಸಂಬಂಧಿತ ಕೋರ್ಸ್‌ಗಳ ಪ್ರವೇಶಾತಿ ಸಾಮರ್ಥ್ಯ ಕುರಿತು ಪುನರ್ ಪರಿಶೀಲನೆ ಮಾಡುವುದು, ಮೂಲ ಇಂಜಿನಿಯರಿಂಗ್ ಕೋರ್ಸ್‌ಗಳ ಪಠ್ಯಕ್ರಮವನ್ನು ಪ್ರಸ್ತುತ ಕಾಲಘಟ್ಟದ ಕೈಗಾರಿಕಾ ಹಾಗೂ ಉದ್ಯೋಗ ಅವಶ್ಯಕತೆಗಳಿಗೆ ತಕ್ಕಂತೆ ಪರಿಷ್ಕರಿಸುವುದು, ಮೂಲ ಇಂಜಿನಿಯರಿಂಗ್ ಕೋರ್ಸ್‌ಗಳಿಗೆ ವಿದ್ಯಾರ್ಥಿಗಳನ್ನು ಆಕರ್ಷಿಸುವ ಸಲುವಾಗಿ ಪ್ರೋತ್ಸಾಹಕ ಕ್ರಮಗಳನ್ನು ಕೈಗೊಳ್ಳುವ ಕುರಿತ ಶಿಾರಸುಗಳನ್ನು ಇಲಾಖೆಯು ನಿರೀಕ್ಷೆ ಮಾಡಲಾಗಿದೆ.

ಸಮಿತಿ ರಚಿಸಲು ಕಾರಣವೇನು?

ರಾಜ್ಯದಲ್ಲಿ 2025-26ನೇ ಸಾಲಿನಲ್ಲಿ ಕೆಇಎ ಮೂಲಕ ಇಂಜಿನಿಯರಿಂಗ್ ಕೋರ್ಸ್‌ಗಳಿಗೆ ಪ್ರವೇಶಾತಿ ಪಡೆದ ಪೈಕಿ 9 ಸಾವಿರಕ್ಕೂ ಹೆಚ್ಚಿನ ಕಂಪ್ಯೂಟರ್ ಸೈನ್ಸ್ ಹಾಗೂ ಸಂಬಂಧಿತ ವಿಭಾಗಗಳ ಸೀಟುಗಳು ಹಂಚಿಕೆಯಾಗದೆ ಉಳಿದಿವೆ. ಇತ್ತೀಚಿನ ವರ್ಷಗಳಲ್ಲಿ ಕಂಪ್ಯೂಟರ್ ಸೈನ್ಸ್ ಹಾಗೂ ಸಂಬಂಧಿತ ಕೊರ್ಸ್‌ಗಳನ್ನು ವ್ಯಾಸಂಗ ಮಾಡಿದ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಉತ್ತೀರ್ಣರಾಗುತ್ತಿದ್ದಾರೆ. ನಿರೀಕ್ಷಿತ ಪ್ರಮಾಣದಲ್ಲಿ ಉದ್ಯೊಗ ದೊರಕದೆ ನಿರುದ್ಯೋಗಿಗಳಾಗುತ್ತಿದ್ದಾರೆ.
ರಾಜ್ಯದಲ್ಲಿ ಇಂಜಿನಿಯರಿಂಗ್ ಪದವಿ ವ್ಯಾಸಂಗ ಮಾಡಿದವರಲ್ಲಿ ಶೇ.17ರಷ್ಟು ಮಂದಿಗೆ ಮಾತ್ರ ಉದ್ಯೋಗ ದೊರೆಯುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.
ಇದೇ ವೇಳೆ ಮೂಲ ಇಂಜಿನಿಯರಿಂಗ್ ಕೋರ್ಸ್‌ಗಳಾದ ಮೆಕಾನಿಕಲ್, ಸಿವಿಲ್ ಆಗೂ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಪ್ರವೇಶಾತಿ ಪ್ರಮಾಣವು ಗಣನೀಯವಾಗಿ ಇಳಿಕೆಯಾಗುತ್ತಿದೆ. ಈ ಹಿನ್ನೆಲಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಮಿತಿಯು ಅತ್ಯಾವಶ್ಯವಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net