ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಅವಕಾಶ : ಶ್ರೀರಾಮಸೇನೆ ಪ್ರತಿಭಟನೆ

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್‌ಗೆ ಅವಕಾಶ ನೀಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಧಾರ ಖಂಡಿಸಿ ಗುರುವಾರ ಬಾಗಲಕೋಟೆ ನಗರದಲ್ಲಿ ಜಿಲ್ಲಾಡಳಿತ ಭವನದ ಎದುರು ಶ್ರೀರಾಮಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿ, ಆಗ್ರಹಿಸಿದರು.
ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್‌ಗೆ ಅವಕಾಶ ನೀಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಧಾರ ಖಂಡಿಸಿ ಗುರುವಾರ ಬಾಗಲಕೋಟೆ ನಗರದಲ್ಲಿ ಜಿಲ್ಲಾಡಳಿತ ಭವನದ ಎದುರು ಶ್ರೀರಾಮಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿ, ಆಗ್ರಹಿಸಿದರು.
Published on
ಬಾಗಲಕೋಟೆ: ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್‌ಗೆ ಅವಕಾಶ ನೀಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ನಗರದಲ್ಲಿ ಗುರುವಾರ ಶ್ರೀರಾಮಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನವನಗರದ ಬಸ್ ನಿಲ್ದಾಣದಿಂದ ಜಿಲ್ಲಾಡಳಿತ ಭವನದ ವರೆಗೆ ಪ್ರತಿಭಟನಾ ಮೆರವಣಿಗೆ ಮೂಲಕ ಆಗಮಿಸಿದ ಪ್ರತಿಭಟನಾಕಾರರು, ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಕೂಡಲೇ ನಿರ್ಧಾರವನ್ನು ಕೈಬಿಡಬೇಕೆಂದು ಆಗ್ರಹಿಸಿ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಹಿಜಾಬ್ ಶಾಲಾ ಸಮವಸöದ ಭಾಗವಲ್ಲ ಎಂದು ನ್ಯಾಯಾಲಯ ತೀರ್ಪು ನೀಡಿದ್ದರೂ ಸಹ ರಾಜ್ಯ ಕಾಂಗ್ರೆಸ್ ಸರ್ಕಾರ, ಹೈಕೋರ್ಟ್ ಆದೇಶವನ್ನು ಕಡೆಗಣಿಸಿ, ಸಂವಿಧಾನ ವಿರೋಽ ನಿಲುವುಗಳನ್ನು ತೆಗೆದುಕೊಂಡಿರುವುದು ತುಷ್ಠೀಕರಣ ರಾಜಕಾರಣವಾಗಿದೆ ಎಂದು ಪ್ರತಿಭಟನಾ ಮುಖಂಡರು ಟೀಕಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರೀ ಒಂದು ಧರ್ಮದ ಪರವಾಗಿ ತೀರ್ಮಾನಗಳನ್ನು ತೆಗೆದುಕೊಳ್ಳುತ್ತ ಬಂದಿದೆ. ಇದು ಕಾಂಗ್ರೆಸ್ ಪಕ್ಷದ ಅವನತಿಗೆ ನಾಂದಿ ಹಾಡಲಿದೆ ಎಂದರು.
ರಾಜ್ಯದಲ್ಲಿ ಯಾರೂ ಕೇಸರಿ ಶಾಲುಗಳನ್ನು ಹಾಕಿಕೊಂಡು ಶಾಲೆ, ಕಾಲೇಜುಗಳಿಗೆ ಯಾವ ವಿದ್ಯಾರ್ಥಿಗಳು ಹೋಗುತ್ತಿಲ್ಲ. ಇದು ನಾವು ಕಾನೂನು ಮತ್ತು ಸಂವಿಧಾನಕ್ಕೆ ನೀಡುವ ಗೌರವವಾಗಿದೆ. ಆದರೆ, ಇದೀಗ ಸರ್ಕಾರವೇ ಮುಂದೆ ನಿಂತು ಒಂದು ವರ್ಗದ ಜನರನ್ನು ತುಷ್ಠೀಕರಿಸಲು ಇದೀಗ ಹಿಜಾಬ್‌ಗೆ ಅವಕಾಶ ನೀಡಿದೆ. ಹೀಗಾಗಿ ಸರ್ಕಾರ ಕೂಡಲೇ ತನ್ನ ನಿರ್ಧಾರ ಬದಲಿಸಿ, ಕೂಡಲೇ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್‌ಗೆ ಅವಕಾಶ ಇಲ್ಲ ಎಂದು ಆದೇಶ ಹೊರಡಿಸಬೇಕು. ಇಲ್ಲವಾದರೆ ಹಿಂದೂ ಸಂಘಟನೆಗಳು ರಾಜ್ಯಾದ್ಯಂತ ಹಳ್ಳಿ ಹಳ್ಳಿಗಳಲ್ಲಿ ಉಗ್ರಹೋರಾಟ ಮಾಡುವುದಾಗಿ ಶ್ರೀರಾಮಸೇನೆ ಸಂಘಟನೆ ರಾಜ್ಯ ಕಾರ್ಯದರ್ಶಿ ಶಹಾಜ ಪವಾರ ಎಚ್ಚರಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net