ಬಾಗೇಪಲ್ಲಿ ನಿವಾಸಿ, ಗೃಹರಕ್ಷಕ ದಳ ಸಿಬ್ಬಂದಿ ಷಫೀವುಲ್ಲಾ(45) ಮೃತ. ಷಫೀವುಲ್ಲಾ ಶನಿವಾರ ರಾತ್ರಿ ವಾಹನ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಆಂಧ್ರದ ಚೆಕ್ಪೋಸ್ಟ್ ಕಡೆಯಿಂದ ಬಂದ ಬೊಲೆರೋ ಷಪೀವುಲ್ಲಾಗೆ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ಬಾಗೇಪಲ್ಲಿಯ ಸಾರ್ವಜನಿಕ ಆಸ್ಪತ್ರೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ.