ಪ್ರತಿ ಅರ್ಜಿಯನ್ನೂ ಪ್ರವಾಸೋದ್ಯಮ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ಜಿಲ್ಲಾ ಪಂಚಾಯಿತಿ/ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳನ್ನೊಳಗೊಂಡ ತಂಡವು ಕೂಲಂಕಷವಾಗಿ ಪರಿಶೀಲಿಸಿದ ಬಳಿಕವೇ ನೋಂದಣಿ ಪ್ರಮಾಣ ಪತ್ರವನ್ನು ವಿತರಿಸಲಾಗುತ್ತದೆ. ಈ ಪ್ರಕ್ರಿಯೆಯಲ್ಲಿ ಪ್ರಮುಖವಾಗಿ ಮೂಲಸೌಕರ್ಯ, ಭದ್ರತೆ, ಸ್ವಚ್ಛತೆ ಹಾಗೂ ಕಾರ್ಯಾಚರಣೆಯ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಮೌಲ್ಯಮಾಪನ ಮಾಡಲಾಗುತ್ತಿದೆ.