ಚಿಕ್ಕಬಳ್ಳಾಪುರ ಬಳಿ ಭೀಕರ ಅಪಘಾತ; ಓವರ್ ಟೇಕ್ ವೇಳೆ ಪಲ್ಟಿ ಹೊಡೆದ ಕಾರು; ನಾಲ್ವರು ಸಾವು | Chikkaballapur

ಚದಲಪುರ ಕ್ರಾಸ್‌ ಸಮೀಪದ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಬುಧವಾರ(ನ. 18) ಭೀಕರ ಅಪಘಾತ ಸಂಭವಿಸಿದ್ದು, ವೇಗವಾಗಿ ಓವರ್‌ ಟೇಕ್‌ ಮಾಡುವ ವೇಳೆ ನಿಯಂತ್ರಣ ತಪ್ಪಿ ಕಾರು ಮಗುಚಿ ಬಿದ್ದಿದೆ. ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಚಿಕ್ಕಬಳ್ಳಾಪುರ ಬಳಿ ಭೀಕರ ಅಪಘಾತ; ಓವರ್ ಟೇಕ್ ವೇಳೆ ಪಲ್ಟಿ ಹೊಡೆದ ಕಾರು; ನಾಲ್ವರು ಸಾವು | Chikkaballapur
Published on: 

ಚಿಕ್ಕಬಳ್ಳಾಪುರ: ತಾಲೂಕಿನ ಚದಲಪುರ ಕ್ರಾಸ್‌ ಸಮೀಪದ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಬುಧವಾರ(ನ. 18) ಭೀಕರ ಅಪಘಾತ ಸಂಭವಿಸಿದ್ದು, ವೇಗವಾಗಿ ಓವರ್‌ ಟೇಕ್‌ ಮಾಡುವ ವೇಳೆ ನಿಯಂತ್ರಣ ತಪ್ಪಿ ಕಾರು ಮಗುಚಿ ಬಿದ್ದಿದೆ. ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಚದಲಪುರ ಕ್ರಾಸ್‌ ಸಮೀಪದಲ್ಲಿನ ನಂದಿ ಗಿರಿಧಾಮ ಠಾಣೆಯ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಅತಿ ವೇಗವಾಗಿ ಚಾಲನೆ ಮಾಡುತ್ತಿದ್ದ ಕಾರು, ಲಾರಿಯನ್ನು ಓವರ್‌ ಟೇಕ್‌ ಮಾಡುವ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಬಳಿಕ ಡಿವೈಡರ್‌ ಮತ್ತು ಎದುರಿಗೆ ಬರುತ್ತಿದ್ದ ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು, ಮುಗುಚಿ ಬಿದ್ದಿದೆ ಎನ್ನಲಾಗಿದೆ.

ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಡಿಕ್ಕಿಯ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ನಂದಿಗಿರಿಧಾಮ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ, ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಕಾರನ್ನು ತೆರವುಗೊಳಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

Also Read
ಸಂಪುಟ ಸಭೆಯಲ್ಲಿ ಡ್ರಗ್ಸ್​ ಪಿಡುಗಿನ ಬಗ್ಗೆ ಕಳವಳ ವ್ಯಕ್ತಪಡಿಸುವಾಗ ಭಾವುಕರಾದ ಪ್ರಧಾನಿ ಮೋದಿ: ಮಾದಕ ವಸ್ತು ನಿರ್ಮೂಲನೆಗೆ ಕರೆ | PM Modi
ಚಿಕ್ಕಬಳ್ಳಾಪುರ ಬಳಿ ಭೀಕರ ಅಪಘಾತ; ಓವರ್ ಟೇಕ್ ವೇಳೆ ಪಲ್ಟಿ ಹೊಡೆದ ಕಾರು; ನಾಲ್ವರು ಸಾವು | Chikkaballapur

ಮೃತರನ್ನು ಬೆಂಗಳೂರಿನ ಯಲಹಂಕ ಮೂಲದ ರಾಜಶೇಖರ್, ವೈಷ್ಣವ್, ಯಶವಂತ್ ಹಾಗೂ ಶ್ರೇಯಸ್ ಎಂದು ಗುರುತಿಸಲಾಗಿದೆ. ಇದೇ ವೇಳೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮತ್ತೊಂದು ಸರಕು ಸಾಗಾಣಿಕೆ ವಾಹನದ ಚಾಲಕ ದಿನೇಶ್​ಗೆ ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಎಸ್ಪಿ ಭೇಟಿ

ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಘಟನೆಯ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹೂ ಭೇಟಿ ನೀಡಿ ಪರಿಶೀಲಿಸಿದ್ದಾರೆ. ನಂದಿಗಿರಿಧಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.