ಉತ್ತರ ಕನ್ನಡಕ್ಕೆ ಆಸ್ಪತ್ರೆ ಭಾಗ್ಯ: ಬಜೆಟ್‌ನಲ್ಲಿ ಮಹತ್ವದ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ; ಆರೋಗ್ಯ ಕ್ಷೇತ್ರಕ್ಕೆ ಬರೋಬ್ಬರಿ 17,818 ಕೋಟಿ ಅನುದಾನ | CM Siddaramaiah Budget

ಉತ್ತರ ಕನ್ನಡ ಮತ್ತು ಯಾದಗಿರಿ ಜಿಲ್ಲೆಗಳಿಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು
ಉತ್ತರ ಕನ್ನಡ ಮತ್ತು ಯಾದಗಿರಿ ಜಿಲ್ಲೆಗಳಿಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು
Published on

ಪ್ರಮುಖ ಮುಖ್ಯಾಂಶಗಳು

  • ಉತ್ತರ ಕನ್ನಡ ಜಿಲ್ಲೆಯ ದಶಕಗಳ ಹೋರಾಟಕ್ಕೆ ಫಲ
  • ಉತ್ತರ ಕನ್ನಡ ಮತ್ತು ಯಾದಗಿರಿ ಜಿಲ್ಲೆಗಳಿಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು
  • 17ನೇ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ
ಬೆಂಗಳೂರು: ಶುಕ್ರವಾರ (ಮಾ.6) ಸಿಎಂ ಸಿದ್ದರಾಮಯ್ಯನವರು 2026-27 ನೇ ಸಾಲಿನ ಬಜೆಟ್​ನ್ನು ಮಂಡಿಸಿದ್ದು, ಇದು ಸಿದ್ದರಾಮಯ್ಯ (CM Siddaramaiah Budget) ಅವರು ಮಂಡಿಸಿದ 17 ನೇ ಬಜೆಟ್​ ಆಗಿದೆ. ಸುಮಾರು ಅರ್ಧ ಶತಮಾನದಿಂದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆಂದು ನಿರಂತರ ಹೋರಾಟ ನಡೆಸುತ್ತಿದ್ದ ಉತ್ತರ ಕನ್ನಡ ಜಿಲ್ಲೆ ಜನರಿಗೆ ಸಂತೋಷದ ಸುದ್ದಿಯನ್ನು ಸಿಎಂ ಸಿದ್ದರಾಮಯ್ಯನವರು ನೀಡಿದ್ದಾರೆ.
ಬಜೆಟ್​ ಮಂಡನೆಯಲ್ಲಿ ಉತ್ತರ ಕನ್ನಡ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಸರ್ಕಾರ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದಾಗಿ ಘೋಷಿಸಿದ್ದು ಸರ್ಕಾರವು ಕರ್ನಾಟಕದಲ್ಲಿ ವೈಧ್ಯಕೀಯ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವ ಗುರಿ ಹೊಂದಿದೆ ಎಂದು ತಿಳಿಸಿದ್ದಾರೆ. ಈ ಭಾರಿಯ ಬಜೆಟ್​ ಗಾತ್ರ ಸುಮಾರು 4.48,004 ಕೋಟಿ ಆಗಿದ್ದು, ಆರೋಗ್ಯ ಕುಟುಂಬ ಕಲ್ಯಾಣ ಯೋಜನೆಗಾಗಿ ಸುಮಾರು 17, 818 ಕೋಟಿ ಹಣವನ್ನು ಮೀಸಲಿಟ್ಟಿದ್ದಾರೆ.
ಕಳೆದವಾರ ಉತ್ತರ ಕನ್ನಡ ಜಿಲ್ಲೆಗೆ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲು ಬಂದಿದ್ದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್​ ಉತ್ತರ ಕನ್ನಡ ಜಿಲ್ಲೆಯಲ್ಲಿ ಹಲವಾರು ವರ್ಷದಿಂದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಬೇಡಿಕೆಯಿದ್ದು, ಅದನ್ನು ಈ ಭಾರಿಯ ಬಜೆಟ್​ನಲ್ಲಿ ನಾವು ಈಡೇರಿಸಲಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಇಂದು ಆ ಮಾತನ್ನು ಉಳಿಸಿಕೊಂಡಿರುವ ಮುಖ್ಯಮಂತ್ರಿಗಳು, ಕಾರವಾರದಲ್ಲಿ 198 ಕೋಟಿ ರೂ. ವೆಚ್ಚದ 450 ಹಾಸಿಗೆ ಸಾಮರ್ಥ್ಯದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದಾಗಿ ಘೋಷಿಸುವ ಮೂಲಕ ಉತ್ತರ ಕನ್ನಡ ಜಿಲ್ಲೆಗೆ ಆಸ್ಪತ್ರೆ ಭಾಗ್ಯವನ್ನು ನೀಡಿದ್ದಾರೆ.

ಸಿಎಂ ದಾಖಲೆ ಬಜೆಟ್​

ಸಿಎಂ ಸಿದ್ದರಾಮಯ್ಯ ಅವರು ಇಂದು ವಿಧಾನಸಭೆಯಲ್ಲಿ ಮಂಡಿಸುತ್ತಿರುವ ದಾಖಲೆಯ 17ನೇ ಬಜೆಟ್ (2026-27 ಸಾಲಿನ ರಾಜ್ಯ ಆಯವ್ಯಯ) ಕರ್ನಾಟಕ ಇತಿಹಾಸದಲ್ಲಿ ಒಂದು ಮಹತ್ವದ ಮೈಲುಗಲ್ಲಾಗಿದೆ. ಏಕೆಂದರೆ, ಯಾವುದೇ ಮುಖ್ಯಮಂತ್ರಿ ಇಷ್ಟೊಂದು ಬಾರಿ ಬಜೆಟ್ ಮಂಡಿಸಿಲ್ಲ.
ಸುಮಾರು 4.2 ರಿಂದ 4.5 ಲಕ್ಷ ಕೋಟಿ ಗಾತ್ರದ ಈ ಬಜೆಟ್‌ನಲ್ಲಿ ಪಂಚ ಗ್ಯಾರಂಟಿ ಯೋಜನೆಗಳಿಗೆ (ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ, ಯುವನಿಧಿ) ಮುಖ್ಯ ಆದ್ಯತೆ ನೀಡಲಾಗಿದ್ದು, ಆದಾಯ ಕೊರತೆ, ಜಿಎಸ್‌ಟಿ ಸುಧಾರಣೆಯಿಂದ ಉಂಟಾದ ನಷ್ಟ ಮತ್ತು ಹೆಚ್ಚುತ್ತಿರುವ ಖರ್ಚುಗಳ ನಡುವೆಯೂ ಮಹಿಳೆಯರು, ರೈತರು, ಯುವಕರು, ಶಿಕ್ಷಣ, ಆರೋಗ್ಯ, ಮೂಲಸೌಕರ್ಯ (ವಿಶೇಷವಾಗಿ ಬೆಂಗಳೂರು ಮತ್ತು ಹಿಂದುಳಿದ ಪ್ರದೇಶಗಳು) ಮತ್ತು ಉದ್ಯೋಗ ಸೃಷ್ಟಿಗೆ ಒತ್ತು ನೀಡಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net