ತೈಲ ಕಂಪನಿಗಳು ಏಕಾಏಕಿ ವಾಣಿಜ್ಯ ಬಳಕೆಯ ಸಿಲಿಂಡರ್ ವಿತರಣೆ ನಿಲ್ಲಿಸಿದ್ದರಿಂದ ಬ್ಲಾಕ್ ಮಾರುಕಟ್ಟೆಯಲ್ಲಿ ದುಪ್ಪಟ್ಟು ದರಕ್ಕೆ ಸಿಲಿಂಡರ್ ಖರೀದಿಸಬೇಕಾದ ಪರಿಸ್ಥಿತಿ ಹೋಟೆಲ್ ಉದ್ಯಮಕ್ಕೆ ಎದುರಾಗಲಿದೆ. ಆದರೆ, ಇದು ಸ್ವಲ್ಪ ದಿನದ ಮಟ್ಟಿಗೆ ಮಾತ್ರ ಈ ವ್ಯವಸ್ಥೆಯನ್ನು ಮಾಲೀಕರು ಮಾಡಿಕೊಳ್ಳಬಹುದು. ಆದರೆ, ತಿಂಗಳಗಟ್ಟಲೆ ಸಿಲಿಂಡರ್ ಸಿಗದಿದ್ದರೆ ಹೋಟೆಲ್‌ಗಳು ಮುಚ್ಚಬೇಕಾಗುತ್ತದೆ. ಆದ್ದರಿಂದ, ಈ ಬಗ್ಗೆ ರಾಜ್ಯ ಸರ್ಕಾರ, ಕೇಂದ್ರದ ಮೇಲೆ ಒತ್ತಡ ತಂದು ಸಮಸ್ಯೆ ಬಗೆಹರಿಸಬೇಕಿದೆ.