ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿ ವತಿಯಿಂದ ಒಟ್ಟು 63 ಮನೆಗಳ ನಿರ್ಮಾಣಕ್ಕೆ ಚಾಲನೆ ನೀಡಲಾಗಿದ್ದು, ಕಾಮಗಾರಿ ವಿಳಂಬವಾಗುತ್ತಿದ್ದ ಹಿನ್ನೆಲೆಯಲ್ಲಿ ಕೆಲ ಪೌರಕಾರ್ಮಿಕರು ತಮ್ಮ ಪಾಲಿನ ಮನೆಗಳನ್ನು ಸ್ವಂತ ಖರ್ಚಿನಲ್ಲಿ ಪೂರ್ಣಗೊಳಿಸಿ ಈಗಾಗಲೇ ವಾಸವಾಗಿದ್ದಾರೆ ಎಂದು ತಿಳಿಸಿದರು. ಇನ್ನೂ ಅನೇಕ ಪೌರಕಾರ್ಮಿಕರು ಕೌಡಳ್ಳಿ ಸಮೀಪದ ಗುಡಿಸಲು ಪ್ರದೇಶಗಳಲ್ಲಿ ವಾಸಿಸುತ್ತಿದ್ದು, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಎಲ್ಲರಿಗೂ ವಸತಿ ಸೌಲಭ್ಯ ಕಲ್ಪಿಸಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.