ದೇವನಹಳ್ಳಿ ಹಾಗೂ ಚನ್ನರಾಯಪಟ್ಟಣ ಭಾಗದಲ್ಲಿ ಕೃಷಿ ವಲಯ ಘೋಷಿಸಿರುವುದನ್ನು ಉದಾಹರಣೆಯಾಗಿ ಉಲ್ಲೇಖಿಸಿದ ಅವರು, ಕೆಲವರು ಕೈಗಾರಿಕೆ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಿದ್ದು, ಅದನ್ನು ಪರಿಶೀಲಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು. "ರೈತರನ್ನು ಭೂಮಿ ಮಾರುವಂತೆ ಯಾರೂ ಬಲವಂತ ಮಾಡಲಾಗುವುದಿಲ್ಲ. ನಾವು ಅಂತಹ ಕೆಲಸ ಮಾಡಿಲ್ಲ, ಮುಂದೆಯೂ ಮಾಡುವುದಿಲ್ಲ" ಎಂದು ಸ್ಪಷ್ಟಪಡಿಸಿದರು.