ಸಚಿವ ಸಂಪುಟ ಪುನಾರಚನೆ ಬಗ್ಗೆ ಚರ್ಚೆಯಾಗುತ್ತಿದೆ, ಖರ್ಗೆ ಅವರ ಭೇಟಿ ವೇಳೆ ಈ ಬಗ್ಗೆ ಚರ್ಚೆ ಮಾಡುತ್ತೀರಾ ಎಂದು ಕೇಳಿದಾಗ, "ಅದೆಲ್ಲಾ ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ. ಅವರು ಹೈಕಮಾಂಡ್ ಬಳಿ ಚರ್ಚೆ ಮಾಡುತ್ತಾರೆ. ನನ್ನನ್ನು ಕರೆದರೆ ನಾನು ಹೋಗುತ್ತೇನೆ. ನಾನು ಕೇವಲ ಪಕ್ಷದ ಕಚೇರಿಗಳ ಶಂಕುಸ್ಥಾಪನೆಗೆ ದಿನಾಂಕ ನಿಗದಿ ಮಾಡಲು ಹೋಗುತ್ತಿರುವೆ. ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರು ಒಟ್ಟಾಗಿ ಶಂಕುಸ್ಥಾಪನೆ ಮಾಡಬೇಕು ಎಂಬುದು ನನ್ನ ಆಸೆ. ಡಿ. 1 ರಿಂದ ಸಂಸತ್ ಅಧಿವೇಶನ ಆರಂಭವಾಗಲಿದ್ದು, ಅಷ್ಟರೊಳಗೆ, ಯಾವುದಾದರೂ ವಾರಾಂತ್ಯದಲ್ಲಿ ಬಂದು ಹೋಗಿ ಎಂದು ಮನವಿ ಮಾಡುತ್ತೇನೆ" ಎಂದು ತಿಳಿಸಿದರು.