ಬೆಂಗಳೂರು: ಸದನದಲ್ಲಿ ಶಾಸಕರಿಗೆ ಮತ್ತು ಅವರ ಕುಟುಂಬಗಳಿಗೆ 4 ಐಪಿಎಲ್ ಟಿಕೆಟ್ ಕೊಡಬೇಕು ಎಂಬ ಆಗ್ರಹ ಕೇಳಿಬಂದ ಕೂಡಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಎಸ್ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಅವರಿಗೆ ರಾಜ್ಯ ಎಲ್ಲ ಶಾಸಕರಿಗೆ ಐಪಿಎಲ್ ಟಿಕೆಟ್‌ಗಳನ್ನು ಉಚಿತವಾಗಿ ನೀಡುವಂತೆ ಸೂಚಿಸಿದರು. ಈ ವಿಚಾರ ಹೊರಬೀಳುತ್ತಿದ್ದಂತೆ ಸಾಕಷ್ಟು ವಿರೋಧಗಳು ವ್ಯಕ್ತವಾಗಿದ್ದು, ಇದೀಗ ಶಾಸಕ ಸುರೇಶ್ ಕುಮಾರ್ ತಮಗೆ ಟಿಕೆಟ್ ಬೇಕಿಲ್ಲ ಎಂದು ಹೇಳಿದ್ದಾರೆ.