ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸುತ್ತಲೇ, ಕಾಂಗ್ರೆಸ್ ನಾಯಕರಲ್ಲಿ ಅಸಮಾಧಾನ ಭುಗಿಲೆದ್ದಿದೆ. 'ಆತ್ಮಸಾಕ್ಷಿಗೆ ವಿರುದ್ಧವಾಗಿ ಕೆಲಸ ಮಾಡೊಲ್ಲ' ಎಂದು ಹಿರಿಯ ನಾಯಕ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರು. ಆ ಬೆನ್ನಲ್ಲೇ ಮುನಿಯಪ್ಪ ಸಹ ತಮಗೆ ಡಿಸಿಎಂ ಸ್ಥಾನ ನೀಡಬೇಕು, ಕೊಟ್ಟಿರುವ ಖಾತೆ ಸರಿಯಿಲ್ಲ ಎನ್ನುತ್ತಾ ಸಾಲು ಸಾಲು ಬೇಡಿಕೆಯನ್ನು ಹೈಕಮಾಂಡ್ ಮುಂದಿಟ್ಟಿದ್ದಾರೆ.