ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮಹಾಂತೇಶ ಬೀಳಗಿ ಸಂಬಂಧಿಕರ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಯಾಣಿಸುತ್ತಿದ್ದರು. ಐವರೊಂದಿಗೆ ಪ್ರಯಾಣಿಸುತ್ತಿದ್ದ ಇನ್ನೋವಾ ಕಾರ್ ನಾಯಿಯನ್ನು ಉಳಿಸಲು ಹೋಗಿ ನಿಯಂತ್ರಣ ತಪ್ಪಿದ್ದು, ವಾಹನದಲ್ಲಿದ್ದ ಮಹಾಂತೇಶ ಬೀಳಗಿ, ಅವರ ಸಹೋದರ ಶಂಕರ ಬೀಳಗಿ, ಜತೆಗಿದ್ದ ಈರಣ್ಣ ಶಿರಸಂಗಿ ಮೃತಪಟ್ಟಿದ್ದಾರೆ. ಅವರ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.