ಗ್ರಾಮೀಣ ಭಾಗದಲ್ಲಿ ಗೋಮಾಳ ಗುರುತಿಸಿ

ಬೆಳಗಾವಿ ಜಿಪಂ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ರಾಹುಲ ಶಿಂಧೆ ಮಾತನಾಡಿದರು. ರವಿ ಬಂಗಾರೆಪ್ಪನವರ, ಎಚ್​.ಡಿ.ಕೋಳೇಕರ, ಮಹಾಂತೇಶ ಮುರಗೋಡ ಇತರರಿದ್ದರು.
ಬೆಳಗಾವಿ ಜಿಪಂ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ರಾಹುಲ ಶಿಂಧೆ ಮಾತನಾಡಿದರು. ರವಿ ಬಂಗಾರೆಪ್ಪನವರ, ಎಚ್​.ಡಿ.ಕೋಳೇಕರ, ಮಹಾಂತೇಶ ಮುರಗೋಡ ಇತರರಿದ್ದರು.
Published on
ಬೆಳಗಾವಿ: ಗ್ರಾಮೀಣ ಭಾಗದಲ್ಲಿ ಗೋಮಾಳ ಗುರುತಿಸಿ ದನಕರುಗಳಿಗೆ ಮೇವು ಪೂರೈಸುವ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಬೇಕು. ಒತ್ತುವರಿಯಾಗಿದ್ದರೆ ತಕ್ಷಣ ತೆರವುಗೊಳಿಸಬೇಕು ಎಂದು ಜಿಪಂ ಸಿಇಒ ರಾಹುಲ ಶಿಂಧೆ ಸೂಚಿಸಿದರು.
ಜಿಪಂ ಸಭಾಂಗಣದಲ್ಲಿ ಸೋಮವಾರ ವಿಬಿ&ಜಿ ರಾಮ್​ ಜಿ ಯೋಜನೆ ಪ್ರಗತಿ ಕುರಿತು ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಗೋಮಾಳ ಸಂರಕ್ಷಣೆ ಮಾಡಲು ಪಶುಪಾಲನಾ ಮತ್ತು ಪಶುವೈದ್ಯಕಿಯ ಸೇವಾ ಇಲಾಖೆ ಅಧಿಕಾರಿಗಳು ಆದ್ಯತೆ ನೀಡಬೇಕು. ಸಂಬಂಧಿಸಿದ ಅಧಿಕಾರಿಗಳು ಕೂಡ ಸಹಕಾರ ನೀಡಬೇಕು ಎಂದರು.
ವಿಕಸಿತ ಭಾರತ ಗ್ಯಾರಂಟಿ ಫಾರ್​ ರೋಜಗಾರ್​ ಆ್ಯಂಡ್​ ಆಜೀವಿಕಾ ಮಿಷನ್​ (ಗ್ರಾಮೀಣ) ಯೋಜನೆಯಡಿ ಜಿಲ್ಲೆಯ ಎಲ್ಲ ಗ್ರಾಪಂಗಳು ಕೂಲಿಕಾರರಿಗೆ ನಿರಂತರವಾಗಿ ಕೂಲಿ ಒದಗಿಸಬೇಕು. ಮಳೆ ಸಮರ್ಪಕವಾಗಿ ಆಗದಿರುವುದರಿಂದ ಗ್ರಾಮೀಣ ಭಾಗದ ಕೂಲಿಕಾರರಿಗೆ ಕೆಲಸದ ಅಗತ್ಯವಿದೆ. ಗ್ರಾಪಂ ವ್ಯಾಪ್ತಿಯಲ್ಲಿ ಕೈಗೊಳ್ಳಲು ಅನುಮೋದಿತ ಕಾಮಗಾರಿಗಳು ಇಲ್ಲದಿದ್ದರೆ ಸದ್ಯ 5 ಕಾಮಗಾರಿಗಳ ಕ್ರಿಯಾಯೋಜನೆ ಸಿದ್ಧಪಡಿಸಿ ಜಿಲ್ಲಾ ಪಂಚಾಯಿತಿಗೆ ಸಲ್ಲಿಸಿದರೆ ತುರ್ತಾಗಿ ಅನುಮೋದನೆ ನೀಡಲಾಗುವುದು ಎಂದರು.
ಗ್ರಾಪಂ ವ್ಯಾಪ್ತಿಯಲ್ಲಿ ಬರಗಾಲ ನಿರ್ವಹಣೆ ಕಾಮಗಾರಿಗಳಿಗೆ ಆದ್ಯತೆ ನೀಡಬೇಕು. ಕೂಲಿಕಾರರು ಕೆಲಸಕ್ಕಾಗಿ ಗುಳೆ ಹೋಗದಂತೆ ಕ್ರಮವಹಿಸುವ ನಿಟ್ಟಿನಲ್ಲಿ ವಿಬಿ&ಜಿ ರಾಮ್​ ಜಿ ಯೋಜನೆಯಡಿ ಕೆಲಸ ಒದಗಿಸಬೇಕು. ಶಾಶ್ವತ ಜೀವನೋಪಾಯಕ್ಕೆ ಅನುಕೂಲವಾಗುವಂತಹ ಕಾಮಗಾರಿ ಕೈಗೊಳ್ಳಲು ಕ್ರಮವಹಿಸಬೇಕು ಎಂದು ಹೇಳಿದರು.
ವಿಬಿ&ಜಿ ರಾಮ್​ ಜಿ ಯೋಜನೆಯಡಿ ಒಟ್ಟು 318 ಕಾಮಗಾರಿ ಕೈಗೊಳ್ಳಲು ಅವಕಾಶವಿದ್ದು, ನೀರಿನ ಸಂರಣೆ, ಮೂಲಸೌಕರ್ಯ, ಜೀವನೋಪಾಯ ಅಭಿವೃದ್ಧಿ, ನೈಸರ್ಗಿಕ ವಿಕೋಪ ನಿರ್ವಹಣೆಗೆ ಸಂಬಂಧಿಸಿದ ವಿವಿಧ ಕಾಮಗಾರಿ ಕೈಗೊಳ್ಳಬಹುದಾಗಿದೆ. ಹೀಗಾಗಿ, ಗ್ರಾಮೀಣ ಭಾಗದ ಸರ್ವಾಂಗೀಣ ಅಭಿವೃದ್ಧಿಗೆ ಅಧಿಕಾರಿಗಳು ಯೋಜನೆ ರೂಪಿಸಿ ಕಾಮಗಾರಿ ಕೈಗೆತ್ತಿಕೊಳ್ಳಬೇಕು ಎಂದು ತಿಳಿಸಿದರು.
ಶಿಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಪಶುಪಾಲನೆ, ಆರೋಗ್ಯ, ಅರಣ್ಯ, ಕೃಷಿ, ತೋಟಗಾರಿಕೆ ಸೇರಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕಾಮಗಾರಿಗಳನ್ನು ಕೂಡ ವಿಬಿ&ಜಿ ರಾಮ್​ ಜಿ ಯೋಜನೆಯಡಿ ಕೈಗೊಳ್ಳಬಹುದಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಯೋಜನೆ ರೂಪಿಸಬೇಕೆಂದು ನಿರ್ದೇಶನ ನೀಡಿದರು.
ಜಿಪಂ ಯೋಜನಾ ನಿರ್ದೇಶಕ ರವಿ ಬಂಗಾರೆಪ್ಪನವರ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಎಚ್​.ಡಿ.ಕೋಳೇಕರ, ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಮಹಾಂತೇಶ ಮುರಗೋಡ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಚೇತನಕುಮಾರ, ಡಿಡಿಪಿಐ ಲೀಲಾವತಿ ಹಿರೇಮಠ, ಡಿಎಚ್​ಒ ಡಾ.ಈಶ್ವರ ಗಡಾದ, ಡಿಎ್​ಒ ರಾಜೇಶ್ವರಿ ಈರನಟ್ಟಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net