ಐಚ್‌ಐವಿ /ಏಡ್ಸ್ ಕುರಿತು ಜಾಗೃತಿಗಾಗಿ ಐಇಸಿ ಪ್ರಚಾರಾಂದೋಲನ : ಯು.ಟಿ. ಖಾದರ್

HIV AIDS Awarness
HIV AIDS Awarness
Published on

ಪ್ರಮುಖ ಮುಖ್ಯಾಂಶಗಳು

  • * ಅ. 12ರ ಅಂತಾರಾಷ್ಟ್ರೀಯ ಯುವ ದಿನದಂದು ಐಇಸಿ ಆಂದೋಲನಕ್ಕೆ ಚಾಲನೆ
ಬೆಂಗಳೂರು:

ಯುವ ಜನರಲ್ಲಿ ಎಚ್‌ಐವಿ/ ಏಡ್ಸ್ ಕುರಿತು ಜಾಗೃತಿ ಮೂಡಿಸಲು ರಾಜ್ಯಾದ್ಯಂತ ಆ. 12ರಿಂದ ಅ.12ರವರಗೆ ಮಾಹಿತಿ, ಶಿಕ್ಷಣ ಮತ್ತು ಸಂವಹನ ( ಐಇಸಿ) ಮೂಲಕ ಪ್ರಚಾರಾಂದೋಲನ ಹಮ್ಮಿಕೊಳ್ಳಲಾಗಿದ್ದು, ಅ. 12ರ ಅಂತಾರಾಷ್ಟ್ರೀಯ ಯುವ ದಿನದಂದು ಆಂದೋಲನಕ್ಕೆ ಚಾಲನೆ ನೀಡಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದರು.

ಎಚ್‌ಐವಿ/ಏಡ್ಸ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೈಗೊಂಡಿರುವ ಕಾರ್ಯಗಳ ಕುರಿತು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಚಿವರು, ರಾಜ್ಯದಲ್ಲಿ 7000 ಕಾಲೇಜು ವಿದ್ಯಾರ್ಥಿಗಳಲ್ಲಿ ಎಚ್‌ಐವಿ ಸೋಂಕು ಕಂಡುಬಂದಿದೆ ಎಂಬ ತಪ್ಪು ಮಾಹಿತಿ ಹರಡಿದೆ. ಆದರೆ, ಕಳೆದ 3 ತಿಂಗಳಲ್ಲಿ 83,5,195 ಮಂದಿ ಎಚ್‌ಐವಿ ಪರೀಕ್ಷೆಗೆ ಒಳಪಟ್ಟಿದ್ದು, ಇವರಲ್ಲಿ 111 ಗರ್ಭಿಣಿಯರು ಸೇರಿ 3202 ಸೋಂಕು ಪ್ರಕರಣಗಳು ವರದಿಯಾಗಿವೆ ಎಂದು ಸ್ಪಷ್ಟಪಡಿಸಿದರು.
ರಾಜ್ಯದಲ್ಲಿ ಸಾಮಾನ್ಯ ಹಾಗೂ ಅಪಾಯದ ಅಂಚಿನಲ್ಲಿರುವ ಸುಮಾರು 56 ಸಾವಿರ ಎಚ್‌ಐವಿ ಸೋಂಕಿತರಿದ್ದಾರೆ ಎಂದು ರಾಷ್ಟ್ರೀಯ ಏಡ್ಸ್ ನಿಯಂತ್ರಣಾ ಸಂಸ್ಥೆ (ನ್ಯಾಕೋ) ತಿಳಿಸಿದೆ. ಆದ್ದರಿಂದ ಜನರು ತಮ್ಮ ಎಚ್‌ಐವಿ ಸ್ಥಿತಿಯನ್ನು ತಿಳಿದುಕೊಳ್ಳಲು ಆ್ಯಪ್ ಸಿದ್ಧಪಡಿಸಲಾಗಿದ್ದು, ಜನರು breakfreeindia.org - HIV Self Risk Assessment ಸ್ಕಾೃನ್ ಮಾಡುವ ಮೂಲಕ ಸ್ವಯಂ ಪರೀಕ್ಷೆ ಮಾಡಿಕೊಂಡು ಅಪಾಯವಿದ್ದರೆ ಎಚ್‌ಐವಿ ಪರೀಕ್ಷೆಗೆ ಒಳಪಡಲು ಸೂಚಿಸಲಾಗಿದೆ. ಇದುವರೆಗೂ 3 ಸಾವಿರಕ್ಕೂ ಅಧಿಕ ಮಂದಿ ಇದನ್ನು ಬಳಸಿ ತಮ್ಮ ಎಚ್‌ಐವಿ ಸ್ಥಿತಿಯನ್ನು ತಿಳಿದುಕೊಂಡಿದ್ದಾರೆ ಎಂದು ಹೇಳಿದರು.
ರಾಜ್ಯದಲ್ಲಿ ಹೆಚ್‌ಐವಿ ಸ್ಥಿತಿಯನ್ನು ತಿಳಿಯದೆ ಇರುವವರಲ್ಲಿ ಜಾಗೃತಿ ಮೂಡಿಸಲು ಠ್ಚಟಠಿ ಅಭಿಯಾನವನ್ನು ಪ್ರಾರಂಭಿಸಲಾಗಿದೆ. ಹೆಚ್ಚು ಅಪಾಯಕಾರಿ ನಡವಳಿಕೆಯ ಗುಂಪುಗಳಿಗೆ ಡೇಟಿಂಗ್ ಆ್ಯಪ್ಸ್ ಮತ್ತು ವಿವಿಧ ಮಾಧ್ಯಮಗಳಲ್ಲಿ ಜಾಹೀರಾತು ನೀಡಿ ಹೆಚ್‌ಐವಿ ಸೋಂಕಿನ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಈ ಕುರಿತು ಸಾರ್ವಜನಿಕರಲ್ಲಿ ಇನ್ನೂ ಹೆಚ್ಚಿನ ಅರಿವು ಮೂಡಿಸಲು ಬೆಂಗಳೂರಿನಲ್ಲಿ ರಾಷ್ಟ್ರ ಹಾಗೂ ಪ್ರಾದೇಶಿಕ ಮಟ್ಟದ ಸಮ್ಮೇಳನ ನಡೆಸಲು ನಿರ್ಧರಿಸಲಾಗಿದೆ ಎಂದರು.

ಏಪ್ರಿಲ್ - ಜೂನ್ - 2026

ಎಚ್‌ಐವಿ ಪರೀಕ್ಷೆಗೆ ಒಳಗಾದವರು - 553453
ಎಚ್‌ಐವಿ ಪರೀಕ್ಷೆಗೆ ಒಳಗಾದವರು - 281742
ಒಟ್ಟು ಪರೀಕ್ಷೆಗೆ ಒಳಗಾದವರು - 83,5,195
ಸೋಂಕು ಹೊಂದಿರುವವರು- 3,202
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net