ತಾಲೂಕಿನ ಟೇಕಲ್ ಹೋಬಳಿಯ ಪೊಲೀಸ್ ಠಾಣೆಯ ಆವರಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪ.ಜಾತಿ ಮತ್ತು ಪ.ಪಂಗಡಗಳ ಮೇಲಿನ ದೌರ್ಜನ್ಯ, ಕುಂದು ಕೊರತೆಗಳ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಸಂವಿಧಾನದಡಿ ಎಲ್ಲ ಸಮುದಾಯಗಳಿಗೆ ಸಮಾನ ಸ್ಥಾನಮಾನ ನೀಡಲಾಗಿದೆ. ಒಬ್ಬರನ್ನು ಅವಾಚ್ಯವಾಗಿ ನಿಂದಿಸುವುದು, ದೌರ್ಜನ್ಯ ಎಸಗುವುದು ಅಪರಾಧವಾಗಿದೆ ಎಂದರು.