ಮುಂದಿನ ದಿನಗಳಲ್ಲಿ ಮತ್ತಷ್ಟು ಪೌರಕಾರ್ಮಿಕರನ್ನು ಕರ್ತವ್ಯಕ್ಕೆ ನಿಯೋಜನೆ ಮಾಡಿಕೊಳ್ಳಲು ಸಂಬಂಧಿಸಿದ ಸಚಿವರೊಟ್ಟಿಗೆ ಚರ್ಚಿಸಿ ಕ್ರಮ ವಹಿಸಲಾಗುವುದು. ಜತೆಗೆ ಕರ್ತವ್ಯ ನಿರ್ವಹಿಸುತ್ತಿರುವ ಪ್ರತಿಯೊಬ್ಬ ಅಧಿಕಾರಿ ಕೇಂದ್ರ ಸ್ಥಾನದಲ್ಲಿ ಹಾಜರಿದ್ದು, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಸೂಚಿಸಿದರು. ಪೌರ ಆಯುಕ್ತೆ ರಾಧಿಕಾ, ಇಂಜಿನಿಯರ್ ಸುರೇಶ್, ಅಧಿಕಾರಿಗಳು, ಪೌರಕಾರ್ಮಿಕರು, ವಾಹನ ಚಾಲಕರು, ಹಾಜರಿದ್ದರು.