ನಗರದ ಬಾಲಕೃಷ್ಣ ಬಡಾವಣೆಯ ಖಾಸಗಿ ಹಾಲ್ನಲ್ಲಿ ಅಂಜುಮನ್ ಇಸ್ಲಾಮಿಯಾ ಕೆಜಿಎಫ್ ಸಂಟನೆಯಿಂದ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖಂಡರು, ದಾವಣಗೆರೆ ದಣ ಉಪ ಚುನಾವಣೆಯ ಸಂದರ್ಭದಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಮೇಲೆ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯಾಗಿದ್ದ ನಸೀರ್ ಅಹ್ಮದ್ ಅವರನ್ನು ವಜಾಗೊಳಿಸಲಾಗಿತ್ತು. ಇದಲ್ಲದೆ ಅಬ್ದುಲ್ ಜಬ್ಬಾರ್ ಅವರ ಮೇಲಿನ ಕ್ರಮಕ್ಕೂ ಸಮುದಾಯ ವಿರೋಧ ವ್ಯಕ್ತಪಡಿಸಿದೆ.