ಆನೇಕಲ್ : ಸಾರ್ವಜನಿಕರ ಬೇಡಿಕೆಯಂತೆ ಆನೇಕಲ್&-ಚಂದಾಪುರ ರಸ್ತೆಯ ಡಾಂಬರೀಕರಣಕ್ಕೆ ಚಾಲನೆ ನೀಡಲಾಗಿದ್ದು, ರಾತ್ರಿ ವೇಳೆ ಕಾಮಗಾರಿ ಮಾಡುತ್ತಿರುವ ಗುತ್ತಿಗೆದಾರರು ಮತ್ತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ವಿರುದ್ಧ ಶಾಸಕ ಬಿ.ಶಿವಣ್ಣ ಆಕ್ರೋಶ ವ್ಯಕ್ತಪಡಿಸಿದರು. ಗುಣಮಟ್ಟದ ರಸ್ತೆ ಮಾಡಬೇಕು, ಇಲ್ಲವಾದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಗುತ್ತಿಗೆದಾರರಿಗೆ ಎಚ್ಚರಿಕೆ ನೀಡಿದರು.