ರಾತ್ರಿ ವೇಳೆ ರೈತ ಸಂಪರ್ಕ ಕೇಂದ್ರದಲ್ಲಿ ಅಕ್ರಮ ಚಟುವಟಿಕೆ?
ಮಸ್ಕಿ ರೈತ ಸಂಪರ್ಕ ಕೇಂದ್ರದಲ್ಲಿ ಏರ್ಪಡಿಸಿದ್ದ ರೈತರಿಗೆ ಬಿತ್ತನೆ ಬೀಜ ವಿತರಣೆ ಕಾರ್ಯಕ್ರಮದಲ್ಲಿ ಶಾಸಕ ಆರ್.ಬಸನಗೌಡ ತುರ್ವಿಹಾಳ ಮಾತನಾಡಿದರು. ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಮಹಿಬೂಬ್‌ಸಾಬ್ ಮುದ್ದಾಪುರ, ಹನುಮಂತಪ್ಪ ಮುದ್ದಾಪುರ, ವೀರೇಶ ಪಾಟೀಲ್, ಶಿವಣ್ಣ ನಾಯಕ, ಪಂಪನಗೌಡ ಗುಡದೂರು, ಸಹಾಯಕ ಕೃಷಿ ನಿರ್ದೇಶಕಿ ವಿಜಯಾಮೂರ್ತಿ ಇತರರಿದ್ದರು.
Published on:
Copied
Follow Us
ಮಸ್ಕಿ: ಉತ್ತಮ ಮಳೆಯಾಗುತ್ತಿದ್ದು, ರೈತರಿಗೆ ತೊಂದರೆ ಆಗದಂತೆ ಬೀಜ ಮತ್ತು ಗೊಬ್ಬರ ದಾಸ್ತಾನು ಮಾಡಬೇಕು. ಸಮರ್ಪಕವಾಗಿ ಪೂರೈಸಬೇಕು ಎಂದು ಆರ್‌ಎಸ್‌ಕೆ ಅಧಿಕಾರಿಗಳಿಗೆ ಶಾಸಕ ಆರ್.ಬಸನಗೌಡ ತುರ್ವಿಹಾಳ ಸೂಚಿಸಿದರು.
ಇಲ್ಲಿನ ರೈತ ಸಂಪರ್ಕ ಕೇಂದ್ರದಲ್ಲಿ ಪ್ರಸಕ್ತ ವರ್ಷ ಮುಂಗಾರು ಹಂಗಾಮಿನ ಬಿತ್ತನೆ ಬೀಜಗಳನ್ನು ರೈತರಿಗೆ ವಿತರಿಸಿ ಗುರುವಾರ ಮಾತನಾಡಿದರು. ರೈತ ಸಂಪರ್ಕ ಕೇಂದ್ರ ಅವ್ಯವಸ್ಥೆಯ ಆಗರವಾಗಿದೆ. ವಿದ್ಯುತ್ ಇಲ್ಲ.
ರೈತರಿಗೆ ಸರಿಯಾದ ಮಾಹಿತಿ ನೀಡುತ್ತಿಲ್ಲ. ರಾತ್ರಿ ಅಕ್ರಮ ಚಟುವಟಿಕೆಗಳು ನಡೆಯುತ್ತವೆ ಎಂದು ರೈತ ಸಂಘ ಮತ್ತು ದಲಿತ ಸೇನೆ ಪದಾಧಿಕಾರಿಗಳು ತಿಳಿಸಿದರು.
ಇದಕ್ಕೆ ಶಾಸಕ ಪ್ರತಿಕ್ರಿಯಿಸಿ, ರೈತ ಸಂಪರ್ಕ ಕೇಂದ್ರವನ್ನು ಊರಿನ ಹೊರವಲಯದಲ್ಲಿ ಕಟ್ಟಿದ್ದೇ ತಪ್ಪು. ಕೆಲವರ ಸ್ವಾರ್ಥಕ್ಕಾಗಿ ಇಲ್ಲಿ ನಿರ್ಮಿಸಲಾಗಿದ್ದು, ಮುಂದಿನ ದಿನಗಳಲ್ಲಿ ಸರಿಪಡಿಸುವುದಾಗಿ ತಿಳಿಸಿದರು.