ಗೋವಾದಿಂದ ಬರುವ ಅಕ್ರಮ ಮದ್ಯ ತಡೆಯಬೇಕು

ಅಬಕಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ
ಅಬಕಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ
Published on
ಬೆಂಗಳೂರು : ನೆರೆಯ ಗೋವಾದಿಂದ ರಾಜ್ಯಕ್ಕೆ ಬರುತ್ತಿರುವ ಅಕ್ರಮ ಮದ್ಯಕ್ಕೆ ಕಡಿವಾಣ ಹಾಕಬೇಕೆಂದು ಅಧಿಕಾರಿಗಳಿಗೆ ಅಬಕಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ತಾಕೀತು ಮಾಡಿದರು.
ವಿಕಾಸಸೌಧದಲ್ಲಿ ಸಚಿವ ಶಿವಲಿಂಗೇಗೌಡ ಅಧ್ಯಕ್ಷತೆಯಲ್ಲಿ ಸಿಎಸ್‌ಆರ್ ನಿಧಿಯಡಿ ಕೈಗೊಳ್ಳಬಹುದಾದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಸಂಬಂಧ ಡಿಸ್ಟಿಲರಿ ಮಾಲೀಕರು ಹಾಗೂ ಅಧಿಕಾರಿಗಳ ಜತೆಗೆ ಸಭೆ ನಡೆಸಿದರು. ಈ ವೇಳೆ ಸಚಿವರು, ಗ್ರಾಹಕರಿಗೆ ಗುಣಮಟ್ಟದ ಮದ್ಯ ವಿತರಣೆ ಆಗಬೇಕು. ಅಕ್ರಮ ಮದ್ಯ ಉತ್ಪಾದನೆ ಮತ್ತು ಪೂರೈಕೆ
ನಿಯಂತ್ರಿಸುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮವಹಿಸಬೇಕು. ತೆರಿಗೆ ವಂಚಿಸುತ್ತಿರುವವರನ್ನು ಪತ್ತೆ ಹಚ್ಚಿ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಬೇಕು. ಗೋವಾದಿಂದ ಎ ಕ್ಲಾಸ್ ಮದ್ಯ ತಂದು ರಾಜ್ಯದಲ್ಲಿ ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕೆಂದು ಅಬಕಾರಿ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಿಎಸ್‌ಆರ್ ನಿಧಿಯನ್ನು ಪ್ರಮುಖವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಚರಂಡಿ ಅಭಿವೃದ್ಧಿ ಕಾಮಗಾರಿಗಳು ಸೇರಿದಂತೆ ಶಾಲಾ-ಕಾಲೇಜು, ಆಸ್ಪತ್ರೆ, ವೈದ್ಯಕೀಯ ಉಪಕರಣ ಖರೀದಿಗೆ ಬಳಕೆ ಮಾಡಬೇಕು. ಇದರಿಂದ ಸಿಎಸ್‌ಆರ್ ನಿಧಿ ಸಮರ್ಪಕವಾಗಿ ಬಳಕೆಯಾಗಲು ಸಾಧ್ಯ ಎಂದು ಕೆ. ಎಂ. ಶಿವಲಿಂಗೇಗೌಡ ಸಲಹೆ ನೀಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net