

ಕರ್ನಾಟಕ ಸೇರಿದಂತೆ ಹಲವು ರಾಜ್ಯದಲ್ಲಿ ಮಳೆಯಾಗುವ ಮುನ್ಸೂಚನೆ ಕೊಟ್ಟ ಐಎಂಡಿ
ಕರ್ನಾಟಕದ ಕೆಲವು ಜಿಲ್ಲೆಯಲ್ಲಿ ಅ.9ರವರೆಗೂ ಮಳೆಯಾಗುವ ಮುನ್ಸೂಚನೆ
ಕೇರಳ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನ ವಿವಿಧ ಭಾಗಗಳಲ್ಲಿ ವರುಣಾರ್ಭಟ
weather update: ನೈಋತ್ಯ ಮುಂಗಾರು ಮತ್ತಷ್ಟು ಚುರುಕುಗೊಂಡಿದೆ. ಈ ಹಿನ್ನೆಲೆ ಇಂದು (ಅ.6) ರಿಂದ ಅ.9ರವರೆಗೂ ಕರ್ನಾಟಕದ ದಕ್ಷಿನ ಒಳನಾಡು, ಉತ್ತರ, ಕರವಾಳಿ ಹಾಗೂ ಮಲೆನಾಡು ಪ್ರದೇಶದಲ್ಲಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಅಲ್ಲದೆ ಕರ್ನಾಟಕ ಸೇರಿದಂತೆ ಕೇರಳ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನ ವಿವಿಧ ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ.
ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲ ಭಾಗಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗುವ ಸಂಭವವಿದೆ. ದಕ್ಷಿಣ ಒಳನಾಡಿನಲ್ಲಿ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಸೇರಿದಂತೆ ಇನ್ನಿತರ ಜಿಲ್ಲೆಯಲ್ಲಿ ಮಳೆಯಾಗಲಿದೆ ಎನ್ನಲಾಗಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ ಹಾಗೂ ಕೊಡಗು, ಕೋಲಾರ, ಮೈಸೂರು, ತುಮಕೂರಿನಲ್ಲಿ ಸಾಧಾರಣ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ಕೊಟ್ಟಿದೆ. ಉತ್ತರ ಒಳನಾಡಿನ ಭಾಗವಾದ ಗದಗ, ಹಾವೇರಿ, ಬಾಗಲಕೋಟೆ, ಬೀದರ್, ಧಾರವಾಡ, ಬೆಳಗಾವಿ, ಕೊಪ್ಪಳ, ರಾಯಚೂರಿನಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಅ.7ರ ಬುಧವಾರದಂದು ಹಾಸನ, ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿಮಳೆಯಾಗುವ ಸಾಧ್ಯತೆಯಿದೆ. ಅ.8ರ ಗುರುವಾರ ಹಾಗೂ ಅ.9ರ ಶುಕ್ರವಾರ ದಿನದಂದು ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ. ಅ.10ರ ಶನಿವಾರ ದಾವಣಗೆರೆ, ಹಾಸನ, ಮೈಸೂರು, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗಬಹುದು.
ಬೆಂಗಳೂರಿನಲ್ಲಿ ಸೋಮವಾರ ಸಂಜೆಯಿಂದ ಧೋ ಎಂದು ಅಬ್ಬರಿಸಲು ಶುರು ಮಾಡಿದ ವರುಣ, ತನ್ನ ಆರ್ಭಟ ನಿಲ್ಲಿಸಿದ್ದು, ಮುಂಜಾನೆ 5:30ಕ್ಕೆ. ಕಚೇರಿಯಿಂದ ಮನೆಗೆ ಹೊರಟಿದ್ದ ಹಲವರು ಮಳೆಯಿಂದಾಗಿ ಹಲವರು ಗಂಟೆಗಟ್ಟಲೇ ಟ್ರಾಫಿಕ್ನಲ್ಲಿ ಸಿಲುಕುವಂತಾಯ್ತು. ಹಲವರು ರಸ್ತೆಗಳು ಜಲಾವೃತಗೊಂಡಿದ್ದವು. ಹಲವರು ಬಸ್ನಲ್ಲಿ ಸಿಲುಕಿ ಮನೆಗಳಿಗೆ ಲೇಟಾಗಿ ತೆರಳುವಂತಾಯ್ತು. ಇಂದು ಮಂಗಳವಾರ(ಸೆ.6)ರಂದು ಮಧ್ಯಾಹ್ನದಿಂದ ರಾತ್ರಿಯವರೆಗೂ ಮಳೆಯಾಗುವ ಮುನ್ಸೂಚನೆಯನ್ನು ಹವಮಾನ ಇಲಾಖೆ ನೀಡಿದೆ.
ಕೇರಳ, ಮಾಹೆ, ಲಕ್ಷದ್ವೀಪ, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲೂ ಗುಡುಗು, ಮಿಂಚು ಮತ್ತು ಬಿರುಗಾಳಿ ಬೀಸುವ ಸಾಧ್ಯತೆಯಿದೆ.
ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಜಮ್ಮು-ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಹಾಗೂ ಹಿಮಾಚಲ ಪ್ರದೇಶದಲ್ಲಿ ಶನಿವಾರದವರೆಗೆ ಮಳೆ ಮುಂದುವರಿಯುವ ಸಾಧ್ಯತೆಯಿದೆ.
ಮಹಾರಾಷ್ಟ್ರ ಸಂಭಾಜಿನಗರ , ನಾಂದೇಡ್, ಲಾತೂರು, ಜಾಲನಾ, ಪರ್ಭಣಿ, ಧಾರಾಶಿವ್ , ಬೀಡ್, ಅಹಿಲ್ಯಾನಗರ, ಹಿಂಗೋಲಿ, ಪೈತಾನ್, ಸಿಲ್ಲೋಡ್, ವೈಜಾಪುರ್ ಮತ್ತು ಉದ್ಗಿರ್ ಪ್ರದೇಶಗಳಲ್ಲಿ ಬುಧವಾರ ಹಾಗೂ ಗುರುವಾರ ಮಳೆಯಾಗಲಿದೆ. ಗೋವಾದಲ್ಲೂ ಇದೇ ರೀತಿಯ ಹವಾಮಾನವಿರಲಿದೆ.
ಬಿಹಾರ, ಜಾರ್ಖಂಡ, ಗಂಗಾನದಿ ತೀರದ ಪಶ್ಚಿಮ ಬಂಗಾಳ ಹಾಗೂ ಸಿಕ್ಕಿಂನಲ್ಲೂ ಮಳೆ ಮುಂದುವರಿಯಲಿದೆ, (ಏಜೆನ್ಸೀಸ್).